Amarnath Yatra: ಅಮರನಾಥ ಯಾತ್ರೆಗೆ ತೆರಳಿದ್ದ ಚನ್ನಗಿರಿಯ 8 ಮಂದಿ ಸೇಫ್
ದಾವಣಗೆರೆ, ಜುಲೈ, 11: ಜಿಲ್ಲೆಯ ಚನ್ನಗಿರಿಯಿಂದ ಅಮರನಾಥ ಯಾತ್ರೆಗೆ ತೆರಳಿದ್ದ 8 ಮಂದಿ ಸುರಕ್ಷಿತವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿಯ ಪ್ರಕಾಶ್, ವಸಂತ ಕುಮಾರ್, ರೇವಣ್ಣ, ಆದಿತ್ಯ, ಪ್ರಹ್ಲಾದ್, ನಲ್ಲೂರಿನ ಸತೀಶ್, ಚನ್ನಗಿರಿ ಪಟ್ಟಣದ ರಂಗಯ್ಯ, ತಿಪ್ಪಗೊಂಡನಹಳ್ಳಿಯಿಂದ ಮಂಜುನಾಥ್ ಡಿಎಂ., ಹಳ್ಳಿಹಾಳು (ಪೆನ್ನಸಮುದ್ರ) ಗ್ರಾಮದ ಜಿ.ಎಸ್. ನಾಗರಾಜು ಅವರು ಇದೇ ಜುಲೈ 7ರಂದು ಶ್ರೀನಗರಕ್ಕೆ ತೆರಳಿ ಅಲ್ಲಿಂದ ಅಮನಾಥಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದು, ನಂತರ ಶ್ರೀನಗರ ಮೂಲಕ ಕರ್ನಾಟಕಕ್ಕೆ ವಾಪಸ್ ಬರುತ್ತಿದ್ದಾರೆ.

ಅಮರನಾಥ ಯಾತ್ರೆಗೆ ತೆರಳಿದ್ದ ಕ್ಷೇತ್ರದ ಎಂಟು ಮಂದಿಯ ಪರಿಸ್ಥಿತಿಯ ಬಗ್ಗೆ ಶಾಸಕ ಬಸವರಾಜು ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಫೋನ್‌ನಲ್ಲಿ ಮಾತನಾಡಿ ಪ್ರವಾಸದಲ್ಲಿರುವವರಿಗೆ ಧೈರ್ಯ ತುಂಬಿದ್ದಾರೆ. ಚನ್ನಗಿರಿ ಕ್ಷೇತ್ರದಿಂದ ಈ ಬಾರಿ ಎಷ್ಟು ಮಂದಿ ತೆರಳಿದ್ದಾರೆ ಎಂಬುದರ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಅವರನ್ನು ಫೋನ್ ಕರೆ ಮೂಲಕ ಸಂಪರ್ಕಿಸಿದ್ದಾರೆ. ಕ್ಷೇತ್ರದಿಂದ ಅಮರನಾಥ ಯಾತ್ರೆಗೆ ತೆರಳಿದ್ದವರನ್ನು ಸಂಪರ್ಕ ಮಾಡಿ ಅವರ ಯೋಗಕ್ಷೇಮವನ್ನೂ ವಿಚಾರಿಸಿದ್ದಾರೆ.
ಅಮರನಾಥ ಸೇರಿದಂತೆ ಉತ್ತರ ಭಾರತ ಪ್ರವಾಸದಲ್ಲಿವರಿಗೆ ಶುಭ ಕೋರಿ ಯಾವುದೇ ಸಮಯದಲ್ಲಿ ನಿಮಗೆ ಸಣ್ಣ ಸಮಸ್ಯೆಯಾದರೂ ನನಗೆ ನೇರವಾಗಿ ಫೋನ್ ಕರೆ ಮಾಡಿ ಸಂಪರ್ಕಿಸಿ ಅಂತಲೂ ಹೇಳಿದ್ದಾರೆ.
ಬೆಲ್ತಾಲ್ ಬೇಸ್‌ಗೆ ವಾಪಾಸಾದ ಕಾಫಿನಾಡಿಗರು
ಭಾರೀ ಮಳೆ ಹಿನ್ನೆಲೆ ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಬಹುತೇಕ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಚಿಕ್ಕಮಗಳೂರು ಮೂಲದ ಐವರು ಅಮರನಾಥ ಯಾತ್ರಿಕರು ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಿನ್ನೆ ಭಾರೀ ಮಳೆ ಹಿನ್ನೆಲೆ ಶೇಷನಾಗ್ ಪ್ರದೇಶದಲ್ಲಿ ಸಿಲುಕಿದ ಚಿಕ್ಕಮಗಳೂರಿನ ಶ್ರೀನಿವಾಸ್, ಮಣಿ , ಭರತ್, ಚಂದ್ರಶೇಖರ್, ಮನೋಜ್ ಐವರು ಇಂದು ಸುರಕ್ಷಿತವಾಗಿ ಬೆಲ್ತಾಲ್ ಬೇಸ್‌ಗೆ ವಾಪಸ್ ಆಗಿದ್ದಾರೆ. ಮತ್ತೊಂದೆಡೆ ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಅಮರನಾಥ ಯಾತ್ರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಅಮರನಾಥ ಯಾತ್ರೆಗೆ ತೆರಳಿದ್ದ ಜಿಲ್ಲೆಯ 5 ಮಂದಿ ನಾವು ಸುರಕ್ಷಿತವಾಗಿದ್ದೇವೆ ಎಂದು ವಿಡಿಯೋ ಕಾಲ್ ಮೂಲಕ ತಿಳಿಸಿದ್ದರು. ಈ ಸಂದೇಶದಿಂದ ಯಾತ್ರಿಕರ ಕುಟುಂಬದವರ ಆತಂಕ ದೊರವಾದಂತಾಗಿದೆ. ಕಳೆದ ಶನಿವಾರ ಜುಲೈ 2ರಂದು ಅಮರನಾಥ ಯಾತ್ರೆಗೆ ತೆರಳುತ್ತಿದ್ದ ಸುಮಾರು 40 ಮಂದಿ ತಂಡದೊಂದಿಗೆ ಮಾಗಡಿಯಿಂದ 5 ಮಂದಿ ಅಮರನಾಥ ಯಾತ್ರೆಗೆ ತೆರಳಿದ್ದರು. ಯಾತ್ರೆಯ ದಾರಿಯಲ್ಲಿ ಅತಿಯಾದ ಮಳೆಯಿಂದಾಗಿ ಭೂ ಕುಸಿತವಾದ ಹಿನ್ನೆಲೆಯಲ್ಲಿ ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದರು.
ಮಾಗಡಿಯಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಡಾಬಾ ಮಹೇಶ್, ಕೆ.ಎನ್.ಕೃಷ್ಣಮೂರ್ತಿ, ಭಾರತ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಚೆನ್ನಮ್ಮನಪಾಳ್ಯದ ನಾಗರಾಜು, ಶಿವಕುಮಾರ್ ಹಾಗೂ ಬಾಲಾಜಿ ಶ್ರೀನಿವಾಸ್ ಪ್ರಕೃತಿ ವಿಕೋಪದ ನಡುವೆ ಸಿಆರ್‌ಪಿಎಫ್ 46 ಬೆಟಾಲಿಯನ್ ನೆರವಿನಿಂದ ಸುರಕ್ಷಿತವಾಗಿ ಬೇಸ್ ಕ್ಯಾಂಪ್‌ನಲ್ಲಿ ಉಳಿದಿರುವುದಾಗಿ ವಿಡಿಯೋ ಕಾಲ್ ಮೂಲಕ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.
ಅಮರನಾಥ ದರ್ಶನ ಮುಗಿಸಿ ಶ್ರೀನಗರ ವೈಷ್ಣೋವಿದೇವಿ ದರ್ಶನಕ್ಕೆ ತೆರಳುವ ಸಮಯದಲ್ಲಿ ಉಂಟಾದ ಭೂ ಕುಸಿತದಿಂದ ಮಾರ್ಗ ಮಧ್ಯದಲ್ಲಿ ಸಿಲುಕಿದ್ದ ಯಾತ್ರಿಗಳನ್ನು ಸೈನಿಕರು ರಕ್ಷಣೆ ಮಾಡಿದ್ದಾರೆ. ನಂತರ ಅವರಿಗೆ ಸಿಆರ್‌ಪಿಎಫ್ 46 ಬೆಟಾಲಿಯನ್ ಶಿಬಿರದಲ್ಲಿ ಉಳಿಯುವ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಯಾತ್ರಿಕರು ಪ್ರಕೃತಿ ವಿಕೋಪದಲ್ಲಿ ಸಿಲುಕಿರುವ ಸುದ್ದಿ ತಿಳಿದು ಮಾಗಡಿಯ ಅಮರನಾಥ ಯಾತ್ರಿಕರ ಮನೆಗಳಲ್ಲಿ ಆತಂಕ ಮನೆ ಮಾಡಿತ್ತು. ಅಲ್ಲದೆ ಕುಟುಂಬದವರು ಯಾತ್ರಿಕರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾಡಳಿತ, ಸ್ಥಳೀಯ ಶಾಸಕರು ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.ಇದೀಗ ಅಮರನಾಥ ಯಾತ್ರಿಕರು ವಿಡಿಯೋ ಕಾಲ್ ಮಾಡಿ ತಾವು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಇದರಿಂದ ಕೊಂಚ ನಿರಾಳರಾಗಿರುವ ಕುಟುಂಬಸ್ಥರು ತಮ್ಮವರನ್ನು ರಕ್ಷಣೆ ಮಾಡಿ, ಉಳಿಯುವ ವ್ಯವಸ್ಥೆ ಮಾಡಿರುವ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಮಿಲಿಟರಿ ಶಿಬಿರದಲ್ಲಿರುವ ತಮ್ಮ ಯಾತ್ರಿಕರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಅಮರನಾಥ ಯಾತ್ರಿಕರ ಕುಟುಂಬಸ್ಥರು ಮನವಿ ಸಲ್ಲಿಸಿದ್ದಾರೆ.
ಮಾಗಡಿ ಅಮರನಾಥ ಯಾತ್ರಿಕರ ರಕ್ಷಣೆಯ ಬಗ್ಗೆ ಸದನದಲ್ಲಿ ಧ್ವನಿ ಎತ್ತಿರುವ ಶಾಸಕ ಹೆಚ್.ಸಿ.ಬಾಲಕೃಷ್ಣ, ಸರ್ಕಾರ ರಾಜ್ಯದ ಅಮರನಾಥ ಯಾತ್ರಿಕರನ್ನು ಸುರಕ್ಷಿತವಾಗಿ ತರೆತರುವ ಭರವಸೆ ನೀಡಿದೆ ಎಂದು ಟ್ವಿಟ್ ಮಾಡಿದ್ದಾರೆ. ನಮ್ಮ ಕ್ಷೇತ್ರದಿಂದ ಜಮ್ಮು ಕಾಶ್ಮೀರದ ಅಮರನಾಥ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳು ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಸದನದ ಗಮನ ಸೆಳೆದು ಸರ್ಕಾರದಿಂದ ಯಾತ್ರಾರ್ಥಿಗಳನ್ನು ರಕ್ಷಿಸಲು ಒತ್ತಾಯಿಸಿದ್ದೇನೆ ಎಂದಿದ್ದರು.
ನನ್ನ ಮನವಿಗೆ ಉತ್ತರಿಸಿದ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ತಮ್ಮ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದರು.
ಇನ್ನು ಶಾಸಕ ಬಸವರಾಜು ವಿ. ಶಿವಗಂಗಾ ಅವರು ನಮಗೆ ಕರೆ ಮಾಡಿ ಈ ವೇಳೆ ನಮ್ಮ ಯೋಗಕ್ಷೇಮವನ್ನು ವಿಚಾರಿಸಿದರು. ಸಮಸ್ಯೆಯಿದ್ದರೆ ಸಂಪರ್ಕಿಸಲು ತಿಳಿಸಿದರು. ಶಾಸಕರಿಗೆ ನಮ್ಮ ಬಗ್ಗೆ ಕಾಳಜಿ ನೋಡಿ ನಮಗೆ ತುಂಬಾ ಸಂತೋಷವಾಯಿತು ಎಂದು ಅಜ್ಜಿಹಳ್ಳಿಯ ಪ್ರಕಾಶ್ ಹೇಳಿದ್ದಾರೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications