ದಾವಣಗೆರೆ: ಹದಡಿ ಮತಗಟ್ಟೆ ಬಳಿ ಎರಡು ಬಣಗಳ ಮಧ್ಯೆ ವಾಗ್ವಾದ

ದಾವಣಗೆರೆ, ಡಿಸೆಂಬರ್ 22: ಇಂದು ಮಂಗಳವಾರ ದಾವಣಗೆರೆ ತಾಲ್ಲೂಕು, ಹೊನ್ನಾಳಿ, ಜಗಳೂರು ತಾಲ್ಲೂಕುಗಳ ವ್ಯಾಪ್ತಿಯ 88 ಗ್ರಾಮ ಪಂಚಾಯತಿಗಳ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.

ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ಬೆಳಗ್ಗೆಯಿಂದಲೇ ಬಿರುಸಿನ ಮತದಾನ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ಮತಗಟ್ಟೆ ಬಳಿಯೇ ನಿಂತಿದ್ದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವವರ ಮಧ್ಯೆ ಜಗಳವಾಗಿದೆ.

ಮತದಾರರನ್ನು ಸೆಳೆಯುವ ವೇಳೆ ಹದಡಿ ಮತಗಟ್ಟೆ ಮುಂಭಾಗದಲ್ಲೇ ಎರಡು ಗುಂಪುಗಳ ನಡುವೆ ಜಗಳ ಆಗಿದ್ದು, ಪರಸ್ಪರ ಒಬ್ಬರಿಗೊಬ್ಬರು ಎಳೆದಾಡಿಕೊಂಡಿದ್ದಾರೆ. ಹದಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿರುವ ಮತಗಟ್ಟೆಯ ಮುಂಭಾಗ ಈ ಘಟನೆ ನಡೆದಿದೆ.

Davanagere: An Altercation Between Two Factions Near The Hadadi Election Booth

ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಇದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಈ ವೇಳೆ ಎರಡು ಗುಂಪುಗಳ ಮಧ್ಯೆ ಪ್ರವೇಶಿಸಿದ ಪೊಲೀಸರು ಸಮಾಧಾನ ಪಡಿಸಿದ್ದಾರೆ. ಬಳಿಕ ಮುಂಜಾಗ್ರತಾ ಕ್ರಮವಾಗಿ ಹದಡಿ ಗ್ರಾಮದಲ್ಲಿ ಡಿಆರ್ ತುಕಡಿ ನಿಯೋಜಿಸಲಾಗಿದೆ.

Davanagere: An Altercation Between Two Factions Near The Hadadi Election Booth

ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾ.ಪಂ ಮತದಾರರ ಪಟ್ಟಿಯಲ್ಲಿ ಆಗಿರುವ ಗೊಂದಲ ಸರಿಪಡಿಸುವಂತೆ ಮತದಾರರು ಮತಗಟ್ಟೆಗೆ ನುಗ್ಗಿದರು. ಬಳಿಕ ಇದು ಚುನಾವಣಾ ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+