Arecanut price: ಸೆಪ್ಟೆಂಬರ್ ಮೊದಲ ವಾರದಲ್ಲೇ ಕ್ವಿಂಟಾಲ್‌ ಅಡಿಕೆ ಧಾರಣೆ 85,000 ದಾಟುವ ಸಾಧ್ಯತೆ: ಆಗಸ್ಟ್ 28ರ ದರ ತಿಳಿಯಿರಿ

Arecanut Price: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಇಂದು (ಆಗಸ್ಟ್ 28) ಅಡಿಕೆ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದಿನ ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 60,499 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮತ್ತಷ್ಟು ಹೆಚ್ಚಾದಂತಾಗಿದೆ. ಮುಂಬರುವ ಸೆಪ್ಟೆಂಬರ್ ಮೊದಲ ವಾರದಲ್ಲೇ 85,000 ರೂಪಾಯಿ ದಾಟಿದರೂ ಆಶ್ಚರ್ಯ ಇಲ್ಲ. ಯಾಕಂದ್ರೆ ಇದೀಗ ದರ ಏರಿಕೆಯತ್ತಲೇ ಮುಖ ಮಾಡುತ್ತಿದೆ.

Areca Nut Prices Likely to Cross 85 000 per Quintal in September first week

ರಾಶಿ ಅಡಿಕೆ ದಾರಣೆ: ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,499 ರೂಪಾಯಿ, ಕನಿಷ್ಠ ದರ 48,559 ರೂಪಾಯಿ ಇದ್ದು, ಸರಾಸರಿ ಬೆಲೆ 59,009 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಇದೀಗ ಮತ್ತೆ ಏರಿಕೆಯಾಗಿರುವುದು ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗುವಂತೆ ಮಾಡಿದೆ.

ಬೆಟ್ಟೆ ಅಡಿಕೆ ಧಾರಣೆ: ಇನ್ನು ಬೆಟ್ಟೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 64,699 ರೂಪಾಯಿ, ಕನಿಷ್ಠ ದರ 56,372 ರೂಪಾಯಿ ಇದ್ದು, ಸರಾಸರಿ ಬೆಲೆ 62,774 ರೂಪಾಯಿ ಇದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆದರೂ ಆಶ್ಚರ್ಯವಿಲ್ಲ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ರಾಶಿ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಾ ಬಂದಿತ್ತು. ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.

ಆದರೆ, ಮೇ ಆರಂಭದಿಂದಲೂ ಜೂನ್‌ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಆದರೆ, ಇದೀಗ ಭರ್ಜರಿಯಾಗಿ ಏರಿಕೆ ಆಗುತ್ತಲಿದೆ. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗುತ್ತಲಿದ್ದು, ಇದನ್ನು ಗಮನಿಸಿದರೆ, ಮುಂಬರುವ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲೇ ಕ್ವಿಂಟಾಲ್‌ ಅಡಿಕೆ ಧಾರಣೆ ಮತ್ತೆ 85,000 ರೂಪಾಯಿ ದಾಟುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈಗಾಗಲೇ ಧಾರಣೆಯಲ್ಲಿ ಸುಧಾರಣೆ ಆಗಿದ್ದು, ಇದರಿಂದ ರೈತರ ಬಾಯಿಗೆ ಸಕ್ಕರೆ ಹಾಕಿದಂತಾಗಿದೆ.

ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಮತ್ತೆ ಬೆಲೆ ಏರಿಕೆ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರು ಇದ್ದಾರೆ. ಮತ್ತೊಂದೆಡೆ ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕವೂ ಸಹ ಬೆಳೆಗಾರರನ್ನ ಕಾಡತೊಡಗಿದೆ.

ಭಾರೀ ಮಳೆ ಹಿನ್ನೆಲೆ ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಅದರಲ್ಲೂ ಈ ವೇಳೆಯೇ ದರ ಹೆಚ್ಚಳ ಆಗುತ್ತಿದ್ದು, ರೈತರು ಹಾಗಾದರೂ ಮಾಡಿ ಅಡಿಕೆಯನ್ನು ಒಳಗಿಸಲಿ ಹರಸಾಹಸ ಪಡುತ್ತಿದ್ದಾರೆ. ಯಾಕಂದ್ರೆ ಮತ್ತೆ ಯಾವಾಗ ಏರಿಕೆ ಆಗುತ್ತದೆಯೋ ಗೊತ್ತಿಲ್ಲ ಎನ್ನುವ ಭಯ ರೈತರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+