Arecanut price: ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಆಗಸ್ಟ್ 31ರ ದರಪಟ್ಟಿ
Arecanut Price: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಭರ್ಜರಿ ಏರಿಕೆಯಾತ್ತ ಸಾಗುತ್ತಲೇ ಬಂದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಹಾಗಾದ್ರೆ, ಜಿಲ್ಲೆಯಲ್ಲಿ ಇಂದು (ಆಗಸ್ಟ್ 31) ಅಡಿಕೆ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದಿನ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 60,399 ರೂಪಾಯಿ ಆಗಿದೆ. ಏರಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಇಳಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕಡಿಮೆ ಆದಂತಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,399 ರೂಪಾಯಿ, ಕನಿಷ್ಠ ದರ 46,099 ರೂಪಾಯಿ ಇದ್ದು, ಸರಾಸರಿ ಬೆಲೆ 59,399 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗೆ ಇಳಿದಿತ್ತು. ಆದರೆ, ಮತ್ತೆ ಏರಿಕೆಯತ್ತ ಸಾಗಿ ಮತ್ತೆ ಇದೀಗ ಇಳಿಮುಖವಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಾ ಬಂದಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಆದರೆ, ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗಿ ಮತ್ತೆ ಇಳಿಮುಖದತ್ತ ಸಾಗಿದೆ. ಆದರೆ, ಕಳೆದ ತಿಂಗಳು ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಜೂನ್‌ನಲ್ಲೇ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಮತ್ತೆ ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕವೂ ಸಹ ಬೆಳೆಗಾರರನ್ನ ಕಾಡತೊಡಗಿದೆ.
ಭಾರೀ ಮಳೆ ಹಿನ್ನೆಲೆ ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಅದರಲ್ಲೂ ಈ ವೇಳೆಯೇ ದರ ಹೆಚ್ಚಳ ಆಗುತ್ತಿದ್ದು, ರೈತರು ಅಡಿಕೆಯನ್ನು ಒಳಗಿಸಲು ಹರಸಾಹಸ ಪಡುವಂತಾಗಿದೆ. ಯಾಕಂದ್ರೆ ಮತ್ತೆ ಯಾವಾಗ ಏರಿಕೆ ಆಗುತ್ತದೆಯೋ ಗೊತ್ತಿಲ್ಲ ಎನ್ನುವ ಭಯ ರೈತರಲಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆಯಿ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.












Click it and Unblock the Notifications