Arecanut Price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಡಿಸೆಂಬರ್ 19ರ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಮತ್ತಷ್ಟು ಕುಸಿತ ಕಂಡಿದೆ. ಇದರಿಂದ ಬೆಳೆಗಾರರಲ್ಲಿ ಆತಂಕ ಉಂಟಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 19) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 19) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 55,700 ರೂಪಾಯಿ, ಕನಿಷ್ಠ ದರ 50,000 ರೂಪಾಯಿ ಇದ್ದು, ಸರಾಸರಿ ಬೆಲೆ 54,308 ರೂಪಾಯಿ ಇದೆ. ಕಳೆದ ಕೆಲ ದಿನಗಳಿಂದ ಅಡಿಕೆ ಧಾರಣೆ ಕುಸಿತ ಕಾಣುತ್ತಿದ್ದು, ಇದರಿಂದ ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಕಳೆದ ಕೆಲ ದಿನಗಳಿಂದ ಏರಿಕೆಯತ್ತ ಹೊರಟಿದ್ದು, ಇದೀಗ ಮತ್ತಷ್ಟು ಕುಸಿತ ಕಂಡಿರುವುದು ಬೆಳೆಗಾರರ ಮುಖದಲ್ಲಿ ಸಂತಸವನ್ನೇ ಕಿತ್ತುಕೊಂಡುಬಿಟ್ಟಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿದೆ. ಫಸಲಿನ ಸಮಯದಲ್ಲೇ ಹೀಗೆ ಇಳಿಕೆ ಆಗಿದ್ದು, ಬೆಳೆಗಾರರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಮತ್ತೊಂದೆಡೆ, ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿದ್ದಾರೆ.












Click it and Unblock the Notifications