Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಮತ್ತಷ್ಟು ಕುಸಿತ: ಇಲ್ಲಿದೆ ಮಾರ್ಚ್ 14ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ ಧಾರಣೆ ಮತ್ತೆ ಕುಸಿತ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕಡಿಮೆಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಮಾರ್ಚ್ 14) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆ ಆಗಿತ್ತು. ಆದರೆ, ಬಳಿ ಏರಿಕೆಯಾಗಿ ಇದೀಗ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಕೆ ಕಂಡಿದೆ.

ಅಡಿಕೆ ಧಾರಣೆ ಮತ್ತೆ ಕುಸಿತ
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಮಾರ್ಚ್ 14) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 54,681 ರೂಪಾಯಿ, ಕನಿಷ್ಠ ದರ 38,400 ರೂಪಾಯಿ ಇದ್ದು, ಸರಾಸರಿ ಬೆಲೆ 52,637 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಭಾರೀ ಕುಸಿತ ಕಂಡಿದೆ. 60,000 ಮುಟ್ಟುತ್ತದೆ ಎನ್ನುವಷ್ಟರಲ್ಲೇ ಮತ್ತೆ ಇಳಿಕೆಯಾಗಿದೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಬಳಿಕ, ಫೆಬ್ರವರಿ ಮೂರನೇ ವಾರದವರೆಗೂ ಧಾರಣೆಯಲ್ಲಿ ಸುಧಾರಣೆ ಕಂಡಿತ್ತು. ಆದರೆ, ಕೊನೆ ವಾರದಲ್ಲಿ ಮತ್ತೆ ಕುಸಿತ ಕಂಡಿತ್ತು. ಇದೀಗ ಮಾರ್ಚ್‌ನಲ್ಲಿಯೂ ಕೂಡ ಏರಿಳಿತ ಆಗುತ್ತಿದ್ದು, ಮಾರ್ಚ್ 14ರಂದು ಅದೇ ಇಳಿಕೆಯ ಹಾದಿ ಹಿಡಿದಿದೆ.
ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಇದೀಗ ಮಾರ್ಚ್ 14ರಂದು ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆದಾರರು ಇದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications