Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಕುಸಿತ: ಇಲ್ಲಿದೆ ಮಾರ್ಚ್ 19ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ ಧಾರಣೆ ಮತ್ತೆ ಕುಸಿತ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಆತಂಕ ಮೂಡಿಸಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಮಾರ್ಚ್ 19) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆ ಆಗಿತ್ತು. ಆದರೆ, ಬಳಿಕ ಏರಿಕೆಯಾಗಿ ಇದೀಗ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಸತತ ಇಳಿಕೆಯಾಗುತ್ತಲಿದೆ.

ಅಡಿಕೆ ಧಾರಣೆ ಮತ್ತೆ ಕುಸಿತ
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಮಾರ್ಚ್ 19) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 54,200 ರೂಪಾಯಿ, ಕನಿಷ್ಠ ದರ 44,000 ರೂಪಾಯಿ ಇದ್ದು, ಸರಾಸರಿ ಬೆಲೆ 52,405 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಭಾರೀ ಕುಸಿತ ಕಂಡಿದೆ. 60,000 ಮುಟ್ಟುತ್ತದೆ ಎನ್ನುವಷ್ಟರಲ್ಲೇ ಮತ್ತೆ ಇಳಿಕೆ ಕಂಡಿರುವುದು ಬೆಳೆಗಾರರನ್ನು ಆತಂಕಕ್ಕೀಡು ಮಾಡಿದೆ.
ಹಿಂದಿನ ದಿನದ ರಾಶಿ ಅಡಿಕೆ ಧಾರಣೆ
* ಗರಿಷ್ಠ ಬೆಲೆ 54,681 ರೂಪಾಯಿ
* ಕನಿಷ್ಠ ಬೆಲೆ 38,400 ರೂಪಾಯಿ
* ಸರಾಸರಿ ಬೆಲೆ 52,637 ರೂಪಾಯಿ
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಬಳಿಕ, ಫೆಬ್ರವರಿ ಮೂರನೇ ವಾರದವರೆಗೂ ಧಾರಣೆಯಲ್ಲಿ ಸುಧಾರಣೆ ಕಂಡಿತ್ತು. ಆದರೆ, ಕೊನೆ ವಾರದಲ್ಲಿ ಮತ್ತೆ ಕುಸಿತ ಕಂಡಿತ್ತು. ಇದೀಗ ಮಾರ್ಚ್‌ನಲ್ಲಿಯೂ ಕೂಡ ಏರಿಳಿತ ಆಗುತ್ತಿದ್ದು, ಮಾರ್ಚ್ 14ರಂದು ಅದೇ ಇಳಿಕೆಯ ಹಾದಿ ಹಿಡಿದಿದೆ.
ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಇದೀಗ ಮಾರ್ಚ್ 19ರಂದು ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆದಾರರು ಇದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications