Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ: ಇಲ್ಲಿದೆ ಮಾರ್ಚ್ 7ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ ಧಾರಣೆ ಕುಸಿತ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕಡಿಮೆಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಮಾರ್ಚ್ 7) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆ ಆಗಿತ್ತು. ಆದರೆ, ಬಳಿ ಏರಿಕೆಯಾಗಿ ಇದೀಗ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಕೆ ಕಂಡಿದೆ.

ಅಡಿಕೆ ಧಾರಣೆ ಮತ್ತೆ ಕುಸಿತ
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಮಾರ್ಚ್ 2) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 56,119 ರೂಪಾಯಿ, ಕನಿಷ್ಠ ದರ 35,000 ರೂಪಾಯಿ ಇದ್ದು, ಸರಾಸರಿ ಬೆಲೆ 53,449 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಭಾರೀ ಕುಸಿತ ಕಂಡಿದೆ. 60,000 ಮುಟ್ಟುತ್ತದೆ ಎನ್ನುವಷ್ಟರಲ್ಲೇ ಮತ್ತೆ ಇಳಿಕೆಯಾಗಿದೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಬಳಿಕ, ಫೆಬ್ರವರಿ ಮೂರನೇ ವಾರದವರೆಗೂ ಧಾರಣೆಯಲ್ಲಿ ಸುಧಾರಣೆ ಕಂಡಿತ್ತು. ಆದರೆ, ಕೊನೆ ವಾರದಲ್ಲಿ ಮತ್ತೆ ಕುಸಿತ ಕಂಡಿತ್ತು. ಇದೀಗ ಮಾರ್ಚ್ 7ರಂದು ಸಹ ಅದೇ ಹಾದಿ ಹಿಡಿದಿದೆ.
ಯಾವಾಗ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಆದರೆ, ಮಾರ್ಚ್ 7ರಂದು ಭಾರೀ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications