Arecanut price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ?; ಜೂನ್‌ 21ರ ದರ ಪಟ್ಟಿ ಇಲ್ಲಿದೆ

Arecanut Price: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದು (ಜೂನ್‌ 21) ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಸಂಪೂರ್ಣವಾಗಿ ಅಂಕಿಅಂಶಗಳ ಸಹಿತ ವಿವರನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಪ್ರಸ್ತುತ ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 57,289 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ಏರಿಕೆಯತ್ತ ಸಾಗಿದ್ದು, ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೆ ಕೆಲವೇ ದಿನಗಳಲ್ಲಿ 61,000 ರೂಪಾಯವರೆಗೂ ತಲುಪುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Arecanut Price details in Davanagere market on June 21

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,289 ರೂಪಾಯಿ, ಕನಿಷ್ಠ ದರ 44,579 ರೂಪಾಯಿ ಇದ್ದು, ಸರಾಸರಿ ಬೆಲೆ 54,377 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 25,786 ರೂಪಾಯಿ, ಕನಿಷ್ಠ ದರ 25,786 ರೂಪಾಯಿ, ಸರಾಸರಿ ದರ 25,786 ರೂಪಾಯಿ ಆಗಿದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತವಾಗಿ ಏರಿಕೆಯಾಗುತ್ತಲೇ ಬಂದಿತ್ತು. ಅಲ್ಲದೆ, ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಡಿತ್ತು.

ಆದರೆ, ಮೇ ಆರಂಭದಿಂದಲೂ ಜೂನ್‌ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಇದೀಗ ಏರಿಕೆಯತ್ತ ಸಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ 60,000 ಮುಟ್ಟಿದರೂ ಆಶ್ಚರ್ಯವಿಲ್ಲ. ಹೀಗೆ ಅಡಿಕೆ ದರದಲ್ಲಿ ಏರಿಕೆ ಆಗುತ್ತಿರುವುದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ, ಮತ್ತೆ ಮೇ ಅಂತ್ಯದಿಂದ ಜೂನ್‌ ತಿಂಗಳ ಕೆಲ ವಾರಗಳವರೆಗೂ ಇಳಿಕೆಯಾಗಿತ್ತಲೇ ಬಂದಿತ್ತು. ಆದರೆ ಇದೀಗ ಏರಿಕೆಯತ್ತ ಸಾಗಿದೆ.

ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ, ಮತ್ತಷ್ಟು ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದೇಗೆ ಎನ್ನುವ ಆತಂಕವೂ ಕೂಡ ಬೆಳೆಗಾರರನ್ನು ಕಾಡುತ್ತಿದೆ.

ಸದ್ಯ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಇನ್ನೂ ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗೆ ಏನಾದ್ರೂ ಆದ್ರೆ ರೈತರಿಗೆ ಒಂದೆಡೆ ಸಂತಸ ಆದ್ರೆ, ಮತ್ತೊಂದೆಡೆ ಅಡಿಕೆಯನ್ನು ಹೇಗೆ ಒಣಗಿಸುವುದು ಎಂಬ ಚಿಂತೆ ಅಡಿಕೆ ಬೆಳೆಗಾರರ ಮನಸಲ್ಲಿ ನೆಲೆಯೂರಿಬಿಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+