Arecanut price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ?; ಜೂನ್ 28ರ ದರ ಪಟ್ಟಿ ಇಲ್ಲಿದೆ
Arecanut Price: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದು (ಜೂನ್ 28) ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಸಂಪೂರ್ಣವಾಗಿ ಅಂಕಿಅಂಶಗಳ ಸಹಿತ ವಿವರನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಪ್ರಸ್ತುತ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 56,599 ರೂಪಾಯಿ ಆಗಿದೆ. ಏರಿಕೆಯತ್ತ ಸಾಗಿದ್ದ ದರ ಮತ್ತೆ ದೇ ಆಡಿದ್ದೇ ಆಟ ಏಂಬಂತೆ ಇಳಿಕೆಯತ್ತ ಸಾಗಿದ್ದು, ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮಾಯವಾದಂತಾಗಿದೆ. ಮತ್ತೆ ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ರೈತರಿದ್ದಾರೆ.

ಅಡಿಕೆ ಧಾರಣೆ ಎಷ್ಟಿದೆ?: ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 56,599 ರೂಪಾಯಿ, ಕನಿಷ್ಠ ದರ 51,689 ರೂಪಾಯಿ ಇದ್ದು, ಸರಾಸರಿ ಬೆಲೆ 54,512 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 26,786 ರೂಪಾಯಿ, ಕನಿಷ್ಠ ದರ 26,786 ರೂಪಾಯಿ, ಸರಾಸರಿ ದರ 26,786 ರೂಪಾಯಿ ಆಗಿದೆ.
ಶುರುವಾಯ್ತು ರೈತರಿಗೆ ಆತಂಕ: ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತವಾಗಿ ಏರಿಕೆಯಾಗುತ್ತಲೇ ಬಂದಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಡಿತ್ತು.
ಆದರೆ, ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಇದೀಗ ಏರಿಕೆಯತ್ತ ಸಾಗಿತ್ತು. ಇದೀಗ ಮತ್ತೆ ಇಳಿಕೆಯಾಗಿದೆ. 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ, ಮತ್ತೆ ಮೇ ಅಂತ್ಯದಿಂದ ಜೂನ್ ತಿಂಗಳಲ್ಲೂ ಇಳಿಕೆಯಾಗಿತ್ತಲಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ, ಮತ್ತಷ್ಟು ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದೇಗೆ ಎನ್ನುವ ಆತಂಕವೂ ಕೂಡ ಬೆಳೆಗಾರರನ್ನು ಕಾಡುತ್ತಿದೆ.
ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ: ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಇನ್ನೂ ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications