Arecanut price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ದರ ಭಾರೀ ಏರಿಕೆ; ಮೇ 28ರ ಅಂಕಿಅಂಶಗಳು ಇಲ್ಲಿವೆ
Arecanut Price: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಹಾವು ಏಣಿಯಂತೆ ಏರಿಳಿತ ಆಗುತ್ತಿರುತ್ತದೆ. ಇನ್ನು ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ಏರಿಯತ್ತ ಸಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದು (ಮೇ 28) ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 59,512 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಏರಿಕೆಯಾಗಿದ್ದು, ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,512 ರೂಪಾಯಿ, ಕನಿಷ್ಠ ದರ 55,012 ರೂಪಾಯಿ ಇದ್ದು, ಸರಾಸರಿ ಬೆಲೆ 57,713 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 29,679 ರೂಪಾಯಿ, ಕನಿಷ್ಠ ದರ 29,679 ರೂಪಾಯಿ, ಸರಾಸರಿ ದರ 29,679 ರೂಪಾಯಿ ಆಗಿದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಇಲ್ಲಿಯವರೆಗೂ ಸತತವಾಗಿ ಏರಿಕೆಯಾಗುತ್ತಲೇ ಬಂದಿದ್ದು, ಏಪ್ರಿಲ್ ಅಂತ್ಯಕ್ಕೆ 60,000 ರೂಪಾಯಿ ದಾಟಿತ್ತು.
ಆದರೆ ಇದೀಗ ಮೇ ಆರಂಭದಲ್ಲಿ ಇಳಿಕೆಯಾಗಿ ಮತ್ತೆ ಏರಿಕೆಯಾಗಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಇದೀಗ 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ, ಮತ್ತೆ ಮೇ ಆರಂಭದಲ್ಲಿ ಮತ್ತೆ ಇಳಿಕೆಯಾಗಿ, ಇದೀಗ ಏರಿಕೆಯತ್ತ ಸಾಗಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ, ಮತ್ತಷ್ಟು ಬೆಲೆ ಏರಿಕೆ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರೆದರೆ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದೇ ಹೇಗೆ ಎನ್ನುವ ಆತಂಕದಲ್ಲಿ ಬೆಳೆಗಾರರಿದ್ದಾರೆ.
ಸದ್ಯ ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಪರಿಣಾಮ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಇನ್ನೂ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಸೇರಿದಂತೆ ಉತ್ತರ ಒಳನಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಾವಣಗೆರೆ ಜಿಲ್ಲೆ ಸಹ ದಕ್ಷಿಣ ಒಳನಾಡಿಗೆ ಸೇರಲಿದೆ. ಈಗಾಗಲೇ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದು, ಅಡಿಕೆ ಬೆಳಗಾರರಿಗೆ ಸಂತಸ ಮೂಡಿಸಿದೆ.












Click it and Unblock the Notifications