Arecanut price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ದರ ಭರ್ಜರಿ ಏರಿಕೆ; ಮೇ 29ರ ಅಂಕಿಅಂಶಗಳು ಇಲ್ಲಿವೆ
Arecanut Price: ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲೇ ಇರುತ್ತದೆ. ಇನ್ನು ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ಏರಿಯತ್ತ ಸಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದು (ಮೇ 29) ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಸಂಪೂರ್ಣವಾಗಿ ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 59,512 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಏರಿಕೆಯಾಗಿದ್ದು, ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,512 ರೂಪಾಯಿ, ಕನಿಷ್ಠ ದರ 55,512 ರೂಪಾಯಿ ಇದ್ದು, ಸರಾಸರಿ ಬೆಲೆ 57,894 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 33,689 ರೂಪಾಯಿ, ಕನಿಷ್ಠ ದರ 26,689 ರೂಪಾಯಿ, ಸರಾಸರಿ ದರ 29,871 ರೂಪಾಯಿ ಆಗಿದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತವಾಗಿ ಏರಿಕೆಯಾಗುತ್ತಲೇ ಬಂದಿತ್ತು. ಅಲ್ಲದೆ, ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಡಿತ್ತು.
ಆದರೆ, ಇದೀಗ ಮೇ ಆರಂಭದಲ್ಲಿ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ 60,000 ಮುಟ್ಟಿದರೂ ಆಶ್ಚರ್ಯವಿಲ್ಲ. ಹೀಗೆ ಅಡಿಕೆ ದರದಲ್ಲಿ ಏರಿಕೆಯಾಗುತ್ತಿರುವುದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಇದೀಗ 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ, ಮತ್ತೆ ಮೇ ಆರಂಭದಲ್ಲಿ ಮತ್ತೆ ಇಳಿಕೆಯಾಗಿ, ಇದೀಗ ಏರಿಕೆಯತ್ತ ಸಾಗಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ, ಮತ್ತಷ್ಟು ಬೆಲೆ ಏರಿಕೆ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರೆದರೆ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದೇ ಹೇಗೆ ಎನ್ನುವ ಆತಂಕದಲ್ಲಿ ಬೆಳೆಗಾರರಿದ್ದಾರೆ.
ಸದ್ಯ ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಪರಿಣಾಮ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಇನ್ನೂ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಸೇರಿದಂತೆ ಉತ್ತರ ಒಳನಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಾವಣಗೆರೆ ಜಿಲ್ಲೆ ಸಹ ದಕ್ಷಿಣ ಒಳನಾಡಿಗೆ ಸೇರಲಿದೆ. ಈಗಾಗಲೇ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದು, ಅಡಿಕೆ ಬೆಳಗಾರರಿಗೆ ಸಂತಸ ಮೂಡಿಸಿದೆ.












Click it and Unblock the Notifications