Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಇಳಿಕೆ: ಇಲ್ಲಿದೆ ಜನವರಿ 24ರ ದರಪಟ್ಟಿ
Arecanut Price: ಕಳೆದ ಎರಡು ದಿನಗಳಿಂದ ಏರಿಕೆಯತ್ತ ಹೊರಟಿದ್ದ ಅಡಿಕೆ ಧಾರಣೆ ಇದೀಗ ಮತ್ತೆ ಕುಸಿತ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕಡಿಮೆಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಜನವರಿ 24) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯಲ್ಲಿ ಕೊಯ್ಲು ಮುಕ್ತಾಯದ ಸಮಯದಲ್ಲೇ ಅಡಿಕೆ ಧಾರಣೆ ಏರಿಕೆಯತ್ತ ಹೊರಟಿತ್ತು. ಬಳಿಕ ಇದ್ದಕ್ಕಿದ್ದಂತೆ ದರ ಕುಸಿತ ಕಂಡು ಮತ್ತೆ ಏರಿಕೆಯತ್ತ ಹೊರಟಿತ್ತು. ಆದರೆ, ಇದೀಗ ಮತ್ತೆ ದಿಢೀರ್ ಇಳಿಕೆ ಆಗಿದೆ. ಇದರಿಂದ ಬೆಳೆಗಾರರಲ್ಲಿ ಮತ್ತೆ ಆತಂಕ ಮೂಡಿಸಿದೆ.

ಈ ವರ್ಷ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆ ಆಗಿತ್ತು. ಬಳಿಕ ಜವವರಿ 22ರಿಂದ ಕಳೆ ಎರಡ್ಮೂರು ದಿನಗಳಿಂದ ಏರಿಕೆ ಓಟ ಮುಂದುವರೆಸಿದ್ದು, ಜನವರಿ 24ರಂದು ದಿಢೀರ್ ಕುಸಿತ ಕಂಡಿದೆ.
ಅಡಿಕೆ ಧಾರಣೆ ಇಳಿಕೆ: ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಜನವರಿ 24) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 56,899 ರೂಪಾಯಿ, ಕನಿಷ್ಠ ದರ 39,000 ರೂಪಾಯಿ ಇದ್ದು, ಸರಾಸರಿ ಬೆಲೆ 54,119 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯಲ್ಲಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಕುಸಿತ ಕಂಡಿದೆ.
ನಿನ್ನೆಯ ಅಡಿಕೆ ಧಾರಣೆ
ಗರಿಷ್ಠ ಬೆಲೆ - 56,909 ರೂಪಾಯಿ
ಕನಿಷ್ಠ ಬೆಲೆ - 51,779 ರೂಪಾಯಿ
ಸರಾಸರಿ ಬೆಲೆ - 55,195 ರೂಪಾಯಿ
ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿ ಮೂರನೇ ವಾರದವರೆಗೂ ಇಳಿಕೆಯತ್ತ ಸಾಗಿದ್ದು, ಇದೀಗ ನಾಲ್ಕನೇ ವಾರದಲ್ಲಿ ಏರಿಕೆಯ ಓಟ ಮುಂದುವರೆಸಿದ್ದು, ಕೊನೆಯಲ್ಲಿ ಮತ್ತೆ ಇಳಿಕೆ ಆಗಿದೆ.
ಈ ವರ್ಷ ಕೊಯ್ಲು ಆರಂಭದಿಂದಲೂ ದರದಲ್ಲಿ ಭಾರೀ ಏರಿಕೆ ಆಗಿತ್ತು. ಆದರೆ, ವರ್ಷದ ಕೊನೇ ತಿಂಗಳು ಅಂದರೆ ಡಿಸೆಂಬರ್ ಮಧ್ಯದವರೆಗೂ ಇಳಿಕೆ ಕಂಡಿದ್ದು, ಬೆಳೆಗಾರರಿಗೆ ಆತಂಕ ಹೆಚ್ಚಾಗಿತ್ತು. ಆದರೆ, ಜನವರಿ ಆರಂಭದಲ್ಲಿ ಧಾರಣೆ ಏರಿಕೆಯತ್ತ ಹೊರಟಿತ್ತು. ಬಳಿಕ ಮತ್ತೆ ಆಡಿದ್ದೇ ಆಟ ಎಂಬಂತೆ ಇಳಿಕೆಯಾಗಿ ಇದೀಗ ಮತ್ತೆ ಇಳಿಕೆಯಾಗಿದೆ. ಬೆಳೆಗಾರರು ಮುಂದಿನ ದಿನಗಳಲ್ಲಿ ಏರಿಕೆ ಆಗುವ ಭರವಸೆಯಲ್ಲಿದ್ದಾರೆ.
ತಿಂಗಳವಾರು ಅಡಿಕೆ ದಾರಣೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಕುಸಿತ ಕಂಡಿದ್ದು, ನಾಲ್ಕನೇ ವಾರದ ಕೊನೆಯಲ್ಲಿ ಮತ್ತೆ ಇಳಿಕೆಯತ್ತ ಸಾಗಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿ ನಾಲ್ಕನೇ ವಾರದ ಕೊನೆಯಲ್ಲಿ ಮತ್ತೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications