Get Updates
Get notified of breaking news, exclusive insights, and must-see stories!

Arecanut price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಅಕ್ಟೋಬರ್ 31ರ ದರಪಟ್ಟಿ

Arecanut Price: ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಕ್ವಿಂಟಾಲ್‌ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿತ್ತು. ಆದರೆ ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಇಳಿಕೆಮುಖದತ್ತ ಹೊರಟಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕುಗ್ಗಿದಂತಾಗಿದೆ. ಹಾಗಾದ್ರೆ ಪ್ರಸ್ತುತ ದರಪಟ್ಟಿ ಎಷ್ಟಿದ ಎನ್ನುವ ಸಂಪೂರ್ಣ ಅಂಕಿಅಂಶಗಳವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೊಯ್ಲಿನ ಸಮಯದಲ್ಲೇ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿ ಇದೀಗ ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಲಿದೆ. ಇನ್ನು ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಅಕ್ಟೋಬರ್ 31) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Arecanut Price Details on October 31 Know details

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 31) ಸಹ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 65,821 ರೂಪಾಯಿ, ಕನಿಷ್ಠ ದರ 58,279 ರೂಪಾಯಿ ಇದ್ದು, ಸರಾಸರಿ ಬೆಲೆ 61,867 ರೂಪಾಯಿ ಇದೆ. ಈ ಮೂಲಕ ನಿನ್ನೆಯ ದರವನ್ನೇ ಕಾಯ್ದುಕೊಂಡಿದೆ. ಕಳೆದ ಕೆಲ ದಿನಗಳಿಂದ ಭರ್ಜರಿ ಏರಿಕೆಯತ್ತ ಮುಖ ಮಾಡಿದ್ದ ಅಡಿಕೆ ಧಾರಣೆಯಲ್ಲಿ ಇದೀಗ ದಿಢೀರ್ ಕುಸಿತ ಆಗಿದೆ.

ಸದ್ಯ ಅಡಿಕೆ ಧಾರಣೆ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.

ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ದೀಪಾವಳಿ ಸಮಯದಲ್ಲಿ ಅಂದರೆ ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲಿಯೇ ಧಾರಣೆ ಭಾರೀ ಇಳಿಕೆಯಾಗಿದೆ.

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ನಂತರ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಎರಡನೇ ವಾರದಿಂದ ನಾಲ್ಕನೆ ವಾರದ ಆರಂಭದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಸತತ ಇಳಿಕೆಯಾಗುತ್ತಲಿದೆ

2025ರ ಜೂನ್‌ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಅಡಿಕೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಇದೇ ವೇಳೆ ಧಾರಣೆ ಸತತವಾಗಿ ಕುಸಿತ ಕಾಣುತ್ತಿರುವುದು ಬೆಳೆಗಾರರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ. ಮತ್ತೊಂದೆಡೆ ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆ ಬೆಳೆಗಾರರದ್ದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+