Arecanut Price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಾಯ್ತು ಗೊತ್ತಾ? ಇಲ್ಲಿದೆ ಡಿಸೆಂಬರ್ 9ರ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ ಕಂಡಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮಾಯವಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 9) ದರ ಎಷ್ಟಿದೆ ತಿಳಿಯಿರಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 9) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,799 ರೂಪಾಯಿ, ಕನಿಷ್ಠ ದರ 51,879 ರೂಪಾಯಿ ಇದ್ದು, ಸರಾಸರಿ ಬೆಲೆ 55,445 ರೂಪಾಯಿ ಇದೆ. ಹೀಗೆ ಧಾರಣೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಅಡಿಕೆ ಧಾರಣೆ ಇದೀಗ ಮತ್ತಷ್ಟು ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಾದರೂ ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಬಳಿಕ ತುಸು ಸುಧಾರಣೆ ಆಗಿ ಕೆಲವು ದಿನಗಳ ಬಳಿಕ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಕೆಯತ್ತ ಸಾಗಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್‌ನಲ್ಲಿ ಭಾರೀ ಇಳಿಕೆ ಮುಂದುವರೆದಿದೆ. ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರು ಇದ್ದಾರೆ.
ಈ ಬಾರಿ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಪರಿಣಾಮ ಅಡಿಕೆ ಫಸಲು ಕೂಡ ಅಷ್ಟೇ ಚೆನ್ನಾಗಿ ಬಂದಿದೆ. ಆದರೆ, ಇದೀಗ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದ್ದು, ಬೆಳೆಗಾರರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications