Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸ್ಥಿರತೆ ರಾಶಿ ಅಡಿಕೆ ಧಾರಣೆ ಇದೀಗ ದಿಢೀರ್ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಏಪ್ರಿಲ್ 9) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ, ಇದೀಗ ಮತ್ತೆ ತುಸು ಏರಿಕೆ ಕಂಡಿದೆ.

ಪ್ರಸ್ತುತ ಅಡಿಕೆ ಧಾರಣೆ ಎಷ್ಟಿದೆ?
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಏಪ್ರಿಲ್ 9) ರಾಶಿ ಅಡಿಕೆ ಗರಿಷ್ಠ (ಕ್ವಿಂಟಾಲ್‌ಗಳಲ್ಲಿ) ದರ 55,600 ರೂಪಾಯಿ, ಕನಿಷ್ಠ ದರ 46,099 ರೂಪಾಯಿ ಇದ್ದು, ಸರಾಸರಿ ಬೆಲೆ 53,904 ರೂಪಾಯಿ ಆಗಿದೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಸ್ಥರತೆ ಕಾಯ್ದುಕೊಂಡಿದ್ದ ದರ ಇದೀಗ ದಿಢೀರ್ ಏರಿಕೆ ಆದಂತಾಗಿದೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಫೆಬ್ರವರಿ, ಮಾರ್ಚ್‌ನಲ್ಲಿ ಏರಿಳಿತ ಆಗುತ್ತಿತ್ತು. ಇದೀಗ ಏಪ್ರಿಲ್‌ನಲ್ಲೂ ಸಹ ಅದೇ ಆಟ ಮುಂದುವರೆದಿದೆ.
ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆಯಾಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಆದರೆ, ಇದೀಗ ಏಪ್ರಿಲ್ 9ರಂದು ದಿಢೀರ್ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications