Arecanut price: ಅಡಿಕೆ ಧಾರಣೆಯಲ್ಲಿ ಭರ್ಜರಿ ಏರಿಕೆ: ಸೆಪ್ಟೆಂಬರ್ 14ರ ದರಪಟ್ಟಿ ಹೇಗಿದೆ ಗೊತ್ತಾ?
Arecanut Price: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆಯನ್ನ ಹೆಚ್ಚಾಗಿ ಬೆಳೆಯಲಾಗುತ್ತದೆ. ಆದರೂ ಸಾಮಾನ್ಯವಾಗಿ ಈ ಭಾಗಗಳ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನ ಶಿವಮೊಗ್ಗ ಮಾರುಕಟ್ಟೆಗೆ ಹಾಕುತ್ತಾರೆ. ಹಾಗಾದ್ರೆ, ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 14) ದರ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇದೀಗ ಪ್ರಸ್ತುತ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 60,699 ರೂಪಾಯಿಗೆ ಏರಿಕೆ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ಭರ್ಜರಿ ಹೆಚ್ಚಳ ಆಗಿದ್ದು, ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,699 ರೂಪಾಯಿ, ಕನಿಷ್ಠ ದರ 50,200 ರೂಪಾಯಿ ಇದ್ದು, ಸರಾಸರಿ ಬೆಲೆ 59,611 ರೂಪಾಯಿಗೆ ಏರಿದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗೆ ಇಳಿದಿತ್ತು. ಆದರೆ, ಇದೀಗ ಏರಿಕೆಯತ್ತ ಹೊರಟಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಆದರೆ, ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗಿ ಮತ್ತೆ ಇಳಿಮುಖದತ್ತ ಸಾಗಿದೆ. ಆದರೆ, ಕಳೆದ ತಿಂಗಳು ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್‌ನ ಮೋರನೇ ವಾರದಲ್ಲಿ ಭರ್ಜರಿ ಏರಿಕೆಯಾಗಿದೆ.
2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಹಾಗೆಯೇ ಈ ಬಾರಿ ಕೂಡ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಮತ್ತಷ್ಟು ಬೆಲೆ ಏರಿಕೆ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಅಡಿಕೆ ಬೆಳೆಗಾರರಲ್ಲಿ ಕಾಡುತ್ತಿದೆ. ಒಂದೆಡೆ ಕಳ್ಳ-ಕಾಕರ ಕಾಟ ಆದರೆ, ಮತ್ತೊಂದೆಡೆ ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಅದರಲ್ಲೂ ಮಲೆನಾಡು ಭಾಗದಲ್ಲಂತೂ ಈಗಲೂ ಜಿನುಗು ಮಳೆ ಮುಂದುವರೆದಿದ್ದು, ಈ ಭಾಗಗಳ ಅಡಿಕೆ ಬೆಳೆಗಾರರಿಗೆ ಇದೇ ದೊಡ್ಡ ಸಮಸ್ಯೆ ಆಗಿಬಿಟ್ಟಿದೆ.












Click it and Unblock the Notifications