ದಾವಣಗೆರೆ: ಮಾರ್ಚ್ 8ರಂದು ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಅಂಕಿಅಂಶಗಳ ವಿವರ
Arecanut price: ಬೆಳ್ಳಿ, ಬಂಗಾರ ದರದಂತೆ ಅಡಿಕೆದ ದರ ಕೂಡ ಏರಿಳಿತ ಆಗುತ್ತಲೇ ಇರುತ್ತದೆ. ಇನ್ನು ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ, ಭತ್ತ ಪ್ರಮುಖ ಬೆಳೆಯಾದರೂ ಅಡಿಕೆ ಬೆಳೆಗಾರರು ಸಹ ಸಾಕಷ್ಟಿದ್ದಾರೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಜಿಲ್ಲೆಯಲ್ಲಿ ಇಂದಿನ ಧಾರಣೆ ಹೇಗಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಇದೀಗ ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 52,279 ರೂಪಾಯಿ ಇದ್ದು, ಕಳೆದ ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದರೆ, 179 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಜಿಲ್ಲೆಯ ಜನರಿಗೆ ಶುಭಸುದ್ದಿ ಸಿಕ್ಕಂತಾಗಿದೆ.

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 52,279 ರೂಪಾಯಿ, ಕನಿಷ್ಠ ದರ 43,000 ರೂಪಾಯಿ ಇದ್ದು, ಸರಾಸರಿ ಬೆಲೆ 49,079 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 24,786 ರೂಪಾಯಿ, ಕನಿಷ್ಠ ದರ 17,659 ರೂಪಾಯಿ, ಸರಾಸರಿ ದರ 22,131 ರೂಪಾಯಿ ಆಗಿದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಅದರಲ್ಲೂ ಇದೀಗ ಬೇಸಿಗೆಗೂ ಮುನ್ನ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.
ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಇನ್ನು ಮಾರ್ಚ್ ಮೊದಲ ವಾರದಲ್ಲಿ ತುಸು ಇಳಿಕೆ ಆಗಿದ್ದು, 52,000 ರೂಪಾಯಿ ಸಮೀಪದಲ್ಲಿದೆ. 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.
ಅದರಲ್ಲೂ ಚನ್ನಗಿರಿ ಅಡಿಕೆ ನಾಡು ಅಂತಾನೇ ಪ್ರಸಿದ್ಧಿಯಾಗುದೆ. ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಆದ್ರೆ, ಬೆಲೆ ಮಾತ್ರ ಏರಿಕೆಯಾಗಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಯಾಗಿತ್ತು. ಇದೀಗ ಸುಧಾರಿದ್ದು, ತುಸು ಏರಿಕೆಯಾಗಿದೆ. ಇನ್ನೂ ಈ ಬಾರಿ ಕೂಡ ಮುಂಗಾರು ಆರ್ಭಟಿಸುವ ಮುನ್ಸೂಚನೆ ಇದ್ದು, ಉತ್ತಮ ಫಸಲು ಬರುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.
ಅಲ್ಲದೆ, ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ತಾಪಮಾನ ದಾಖಲಾಗುತ್ತಿದ್ದು, ಇದರಿಂದ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆಯು ಮಾರ್ಚ್ 2ನೇ ವಾರದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಳಹವೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಅಡಿಕೆ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.












Click it and Unblock the Notifications