Arecanut Price: ಪ್ರಸ್ತುತ ಕ್ವಿಂಟಾಲ್‌ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಅಂಕಿಅಂಶಗಳ ವಿವರ

Arecanut price: ಬೆಳ್ಳಿ, ಬಂಗಾರ ದರದಂತೆ ಅಡಿಕೆದ ದರ ಕೂಡ ಏರಿಳಿತ ಆಗುತ್ತಲೇ ಇರುತ್ತದೆ. ಇನ್ನು ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ, ಭತ್ತ ಪ್ರಮುಖ ಬೆಳೆಯಾದರೂ ಅಡಿಕೆ ಬೆಳೆಗಾರರು ಸಹ ಸಾಕಷ್ಟಿದ್ದಾರೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಜಿಲ್ಲೆಯಲ್ಲಿ ಇಂದಿನ ಧಾರಣೆ ಹೇಗಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಇದೀಗ ಕ್ವಿಂಟಾಲ್‌ ಅಡಿಕೆಯ ಗರಿಷ್ಠ ದರ 52,299 ರೂಪಾಯಿ ಇದೆ. ಕಳೆದ ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದರೆ, ದರದಲ್ಲಿ ಯಾವುದೇ ಬದಲಾವಣೆಯಾಗಿದೆ ಎಂದು ತಿಳಿದುಬಂದಿದೆ.

Arecanut price in Davanagere market on March 13 know details

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 52,299 ರೂಪಾಯಿ, ಕನಿಷ್ಠ ದರ 35,012 ರೂಪಾಯಿ ಇದ್ದು, ಸರಾಸರಿ ಬೆಲೆ 48,087 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 24,229 ರೂಪಾಯಿ, ಕನಿಷ್ಠ ದರ 23,387 ರೂಪಾಯಿ, ಸರಾಸರಿ ದರ 24,308 ರೂಪಾಯಿ ಆಗಿದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಅದರಲ್ಲೂ ಇದೀಗ ಬೇಸಿಗೆಗೂ ಮುನ್ನ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಮತ್ತೆ 52 ಸಾವಿರ ಗಡಿ ದಾಟಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಇನ್ನು ಮಾರ್ಚ್ ಎರಡನೇ ವಾರದಲ್ಲಿ 52,000 ರೂಪಾಯಿ ಗಡಿ ದಾಡಿದೆ. 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.

ಅದರಲ್ಲೂ ಚನ್ನಗಿರಿ ಅಡಿಕೆ ನಾಡು ಅಂತಾನೇ ಪ್ರಸಿದ್ಧಿಯಾಗಿದೆ. ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಆದ್ರೆ, ಬೆಲೆ ಮಾತ್ರ ಏರಿಕೆಯಾಗಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಯಾಗಿತ್ತು. ಇದೀಗ ಸುಧಾರಿಸಿದ್ದು, ತುಸು ಏರಿಕೆಯಾಗಿದೆ. ಇನ್ನೂ ಈ ಬಾರಿ ಕೂಡ ಮುಂಗಾರು ಆರ್ಭಟಿಸುವ ಮುನ್ಸೂಚನೆ ಇದ್ದು, ಉತ್ತಮ ಫಸಲು ಬರುವುದಲ್ಲದೆ, ಬೆಲೆ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.

ಅಲ್ಲದೆ, ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ತಾಪಮಾನ ದಾಖಲಾಗುತ್ತಿದ್ದು, ಇದರಿಂದ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆಯು ಮಾರ್ಚ್‌ 2ನೇ ವಾರದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಅದಂತೆಯೇ ಇದೀಗ ರಾಜ್ಯ ರಾಜಧಾನಿ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಜಿಲ್ಲೆಗಳ ಹಲವೆಡೆ ಮಳೆಯಾಗಿದೆ. ಹಾಗೆಯೇ ಜೂನ್‌ ಆರಂಭವಾಗುತ್ತಿದ್ದಂತೆ ಮುಂಗಾರು ಪ್ರವೇಶ ಪಡೆಯಲಿದೆ ಎನ್ನುವ ಮುನ್ಸೂಚನೆ ಇದ್ದು, ಈ ಭರವಸೆಯಲ್ಲಿ ರೈತರ ಮುಖದಲ್ಲಿ ಸಂತಸ ಹೆಚ್ಚಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+