Arecanut price: ಅಡಿಕೆ ಧಾರಣೆ ಭರ್ಜರಿ ಏರಿಕೆ; ಏಪ್ರಿಲ್ 5ರ ದರ ಪಟ್ಟಿ ಇಲ್ಲಿದೆ
Arecanut price: ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಲೇ ಇರುತ್ತದೆ. ಕಳೆದ ಎರಡು ತಿಂಗಳಿಗೆ ಹೋಲಿಕೆ ಮಾಡಿದ್ರೆ ಮಾರ್ಚ್‌ನಲ್ಲಿ ಅಡಿಕೆ ದರ ತುಸು ಏರಿಕೆಯಾಗಿದೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದ್ದು, ಇದೀಗ ಜಿಲ್ಲೆಯಲ್ಲಿ ಪ್ರಸ್ತುತ ಅಡಿಕೆ ಧಾರಣೆ ಹೇಗಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಇದೀಗ ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 54,629 ರೂಪಾಯಿಗೆ ಏರಿಕೆಯಾಗಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮತ್ತೆ ಹೆಚ್ಚಾದಂತಾಗಿದೆ.

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 54,629 ರೂಪಾಯಿ, ಕನಿಷ್ಠ ದರ 50,512 ರೂಪಾಯಿ ಇದ್ದು, ಸರಾಸರಿ ಬೆಲೆ 53,130 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 24,287 ರೂಪಾಯಿ, ಕನಿಷ್ಠ ದರ 20,786 ರೂಪಾಯಿ, ಸರಾಸರಿ ದರ 22,436 ರೂಪಾಯಿ ಆಗಿದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಅದರಲ್ಲೂ ಇದೀಗ ಬೇಸಿಗೆಗೂ ಮುನ್ನ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ.
ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಇನ್ನು ಮಾರ್ಚ್ ತಿಂಗಳ ಕೊನೆಯವರೆಗೂ ನಿದಾನಗತಿಯಲ್ಲಿ 53,000 ಗಡಿ ದಾಟುತ್ತಾ ಬಂದಿತ್ತು. ಇದೀಗ ಏಪ್ರಿಲ್ ಮೊದಲ ವಾರದಲ್ಲೇ 55,000 ರೂಪಾಯಿ ಸನಿಹದತ್ತ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಅದರಲ್ಲೂ ಚನ್ನಗಿರಿ ಅಡಿಕೆ ನಾಡು ಅಂತಾನೇ ಪ್ರಸಿದ್ಧಿಯಾಗಿದೆ. ಇದೀಗ ಇಳಿಕೆಯತ್ತ ಸಾಗಿದ್ದ ಅಡಿಕೆ ದರ ಮತ್ತೆ ಏರಿಕೆಯಾಗಿದ್ದು, ಇದರಿಂದ ಬೆಳೆಗಾರರು ಸಂತಸಗೊಂಡಿದ್ದಾರೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಆದ್ರೆ, ಬೆಲೆ ಮಾತ್ರ ಏರಿಕೆಯಾಗಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಯಾಗಿತ್ತು. ಇದೀಗ ಸುಧಾರಿದ್ದು, ತುಸು ಏರಿಕೆಯಾಗಿದೆ. ಇನ್ನೂ ಈ ಬಾರಿ ಕೂಡ ಮುಂಗಾರು ಆರ್ಭಟಿಸುವ ಮುನ್ಸೂಚನೆ ಇದ್ದು, ಉತ್ತಮ ಫಸಲು ಬರುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.
ಅಲ್ಲದೆ, ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ತಾಪಮಾನ ದಾಖಲಾಗುತ್ತಿದ್ದು, ಇದರಿಂದ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆಯ ಪ್ರಕಾರ ಮಾರ್ಚ್ ಅಂತ್ಯದಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅರ್ಭಟಿಸಲಿದ್ದಾರೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಮುಂಗಾರು ಪೂರ್ವ ಮಳೆ ಹಲವೆಡೆ ಆರ್ಭಟಿಸಿ ಸುಮ್ಮನಾಗಿದ್ದು, ಮತ್ತೆ ಆರ್ಭಟಿಸುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಮುಂದಿನ ದಿನಗಳಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಳಹವೆ ಮುಂದುವರೆಯಲಿದೆ ಅಂತಲೂ ಹವಾಮಾನ ಇಲಾಖೆ ಭವಿಷ್ಯ ನುಡಿದೆ.












Click it and Unblock the Notifications