Arecanut price: ಅಡಿಕೆ ಧಾರಣೆ ಭಾರೀ ಏರಿಕೆ; ಏಪ್ರಿಲ್‌ 9ರ ದರ ಪಟ್ಟಿ ಇಲ್ಲಿದೆ

Arecanut price: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತದೆ. ಕಳೆದ ತಿಂಗಳಿಗೆ ಹೋಲಿಕೆ ಮಾಡಿದರೆ ಈ ತಿಂಗಳು ಅಂದ್ರೆ ಏಪ್ರಿಲ್‌ನಲ್ಲಿ ಸತತವಾಗಿ ಏರಿಕೆಯಾಗುತ್ತಲೇ ಇದೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದ್ದು, ಇದೀಗ ಜಿಲ್ಲೆಯಲ್ಲಿ ಪ್ರಸ್ತುತ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಇದೀಗ ಕ್ವಿಂಟಾಲ್‌ ಅಡಿಕೆಯ ಗರಿಷ್ಠ ದರ 55,298 ರೂಪಾಯಿಗೆ ಏರಿಕೆ ಆಗಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮತ್ತೆ ಹೆಚ್ಚಾಗಿದೆ.

Arecanut Price increase in Davanagere market on April 9 know details

ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 55,298 ರೂಪಾಯಿ, ಕನಿಷ್ಠ ದರ 51,212 ರೂಪಾಯಿ ಇದ್ದು, ಸರಾಸರಿ ಬೆಲೆ 53,590 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 24,829 ರೂಪಾಯಿ, ಕನಿಷ್ಠ ದರ 21,736 ರೂಪಾಯಿ, ಸರಾಸರಿ ದರ 23,226 ರೂಪಾಯಿ ಆಗಿದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಅದರಲ್ಲೂ ಇದೀಗ ಬೇಸಿಗೆಗೂ ಮುನ್ನ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ.

ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಇಲ್ಲಿಯವರೆಗೂ ಅಂದರೆ ಏಪ್ರಿಲ್‌ 9ರ ವರೆಗೂ ಸತತವಾಗಿ ಏರಿಕೆಯಾಗುತ್ತಾ 55,000 ಗಡಿ ದಾಟಿದೆ. ಇದರಿಂದ ಅಡಿಕೆ ಬೆಳೆಗಾರರು ಸಂತಸದಲ್ಲಿದ್ದಾರೆ. ಮತ್ತೊಂದೆಡೆ ಇನ್ನೂ ಕೆಲವೇ ದಿನಗಳಲ್ಲಿ 60,000 ರೂಪಾಯಿ ಮುಟ್ಟಿದರೂ ಆರ್ಶರ್ಯವಿಲ್ಲ.

2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಅದರಲ್ಲೂ ಚನ್ನಗಿರಿ ಅಡಿಕೆ ನಾಡು ಅಂತಾನೇ ಪ್ರಸಿದ್ಧಿಯಾಗಿದೆ. ಇದೀಗ ಇಳಿಕೆಯತ್ತ ಸಾಗಿದ್ದ ಅಡಿಕೆ ದರ ಮತ್ತೆ ಏರಿಕೆಯಾಗಿದ್ದು, ಇದರಿಂದ ಬೆಳೆಗಾರರು ಸಂತಸಗೊಂಡಿದ್ದಾರೆ.

ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಆದ್ರೆ, ಬೆಲೆ ಮಾತ್ರ ಏರಿಕೆಯಾಗಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಯಾಗಿತ್ತು. ಇದೀಗ ಸುಧಾರಿದ್ದು, ತುಸು ಏರಿಕೆಯಾಗಿದೆ. ಇನ್ನೂ ಈ ಬಾರಿ ಕೂಡ ಮುಂಗಾರು ಆರ್ಭಟಿಸುವ ಮುನ್ಸೂಚನೆ ಇದ್ದು, ಉತ್ತಮ ಫಸಲು ಬರುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.

ಅಲ್ಲದೆ, ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ತಾಪಮಾನ ದಾಖಲಾಗುತ್ತಿದ್ದು, ಇದರಿಂದ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅರ್ಭಟಿಸಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಮುಂಗಾರು ಪೂರ್ವ ಮಳೆ ಹಲವೆಡೆ ಆರ್ಭಟಿಸುತ್ತಿದ್ದು, ಇನ್ನೂ ಕೆಲವೇ ತಿಂಗಳುಗಳಲ್ಲಿ ಮುಂಗಾರು ಮಳೆ ಎಂಟ್ರಿ ಕೊಡುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+