Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸ್ಥಿರತೆ ರಾಶಿ ಅಡಿಕೆ ಧಾರಣೆ ಇದೀಗ ದಿಢೀರ್ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಹೆಚ್ಚಾದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಏಪ್ರಿಲ್ 11) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ, ಇದೀಗ ಮತ್ತೆ ತುಸು ಏರಿಕೆಯಾಗಿದೆ.

ಪ್ರಸ್ತುತ ಅಡಿಕೆ ಧಾರಣೆ ಎಷ್ಟಿದೆ?
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಏಪ್ರಿಲ್ 11) ರಾಶಿ ಅಡಿಕೆ ಗರಿಷ್ಠ (ಕ್ವಿಂಟಾಲ್‌ಗಳಲ್ಲಿ) ದರ 56,100 ರೂಪಾಯಿ, ಕನಿಷ್ಠ ದರ 48,000 ರೂಪಾಯಿ ಇದ್ದು, ಸರಾಸರಿ ಬೆಲೆ 54,343 ರೂಪಾಯಿ ಆಗಿದೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ದರ ಇದೀಗ ದಿಢೀರ್ ಏರಿಕೆ ಆದಂತಾಗಿದೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಫೆಬ್ರವರಿ, ಮಾರ್ಚ್‌ನಲ್ಲಿ ಏರಿಳಿತ ಆಗುತ್ತಿತ್ತು. ಇದೀಗ ಏಪ್ರಿಲ್ 11ರಂದು ಭರ್ಜರಿ ಏರಿಕೆಯಾಗಿದೆ.
ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆಯಾಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಆದರೆ, ಇದೀಗ ಏಪ್ರಿಲ್ 11ರಂದು ದಿಢೀರ್ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
2026ರ ಆರಂಭದಿಂದಲೂ ದರದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿವೆ. ಜನವರಿಯಲ್ಲಿ 59,299 ರೂಪಾಯಿಗಳಷ್ಟಿದ್ದ ಬೆಲೆಯು ಫೆಬ್ರವರಿ ವೇಳೆಗೆ ದಿಢೀರನೆ 56,119 ರೂಪಾಯಿಗಳಿಗೆ ಕುಸಿದಿತ್ತು. ಈ ಇಳಿಕೆಯ ಹಾದಿ ಮಾರ್ಚ್‌ನಲ್ಲೂ ಮುಂದುವರಿದು ಬೆಲೆಯು 55,500 ರೂಪಾಯಿ ಆಗಿತ್ತು. ಆದರೆ, ಏಪ್ರಿಲ್ 11ರಂದು ಬೆಲೆಯು 56,100 ರೂಪಾಯಿಗಳಿಗೆ ಏರಿಕೆಯಾಗಿದೆ.
-
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Adani Group: ಅದಾನಿ ನಾಯಕತ್ವದ ಮೇಲೆ ಜೈಪ್ರಕಾಶ್ ಗೌರ್ ಭರವಸೆ: ₹14,535 ಕೋಟಿಯ ಬೃಹತ್ ಡೀಲ್ಗೆ ಗ್ರೀನ್ ಸಿಗ್ನಲ್. -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ












Click it and Unblock the Notifications