Arecanut price: ಕೆಲವೇ ದಿನಗಳಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ದಾಖಲೆ ಮಟ್ಟದಲ್ಲಿ ಏರಿಕೆ ಸಾಧ್ಯತೆ: ಈಗಿನ ದರ ತಿಳಿಯಿರಿ
Arecanut Price: ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಕಳೆದ ಕೆಲ ದಿನಗಳಿಂದ ಏರಿಕೆಯತ್ತ ಸಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆಯನ್ನ ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ ಜಿಲ್ಲೆಯಲ್ಲಿ ಇದೀಗ ಪ್ರಸ್ತುತ ದರ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದಿನ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 61,309 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮತ್ತಷ್ಟು ಹೆಚ್ಚಾದಂತಾಗಿದೆ. ಕೆಲವೇ ದಿನಗಳಲ್ಲಿ ಮತ್ತೆ ದಾಖಲೆ ಮೊತ್ತದವರೆಗೆ ತಲುಪಿದರೂ ಆಶ್ಚರ್ಯ ಇಲ್ಲ.

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 61,309 ರೂಪಾಯಿ, ಕನಿಷ್ಠ ದರ 55,000 ರೂಪಾಯಿ ಇದ್ದು, ಸರಾಸರಿ ಬೆಲೆ 59,599 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗೆ ಇಳಿದಿತ್ತು. ಆದರೆ, ಇದೀಗ ಮತ್ತೆ ಏರಿಕೆಯತ್ತ ಸಾಗಿರುವುದು ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ದುಪ್ಟಟ್ಟಾಗುವಂತೆ ಮಾಡಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಾ ಬಂದಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಆದರೆ, ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಆದರೆ, ಇದೀಗ ಭರ್ಜರಿಯಾಗಿ ಏರಿಕೆಯಾಗುತ್ತಲಿದೆ. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗುತ್ತಲಿದ್ದು, ಆಗಸ್ಟ್ ತಿಂಗಳಿನಲ್ಲೇ ಕ್ವಿಂಟಾಲ್ ಅಡಿಕೆ ದರದಲ್ಲಿ ಮತ್ತೆ ದಾಖಲೆ ಮಟ್ಟ ತಲುಪುವ ಸಾಧ್ಯತೆಯಿದೆ. ಈಗಾಗಲೇ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿದ್ದರು, ಇದರಿಂದ ರೈತರು ಸಂತಸದಲ್ಲಿದ್ದಾರೆ. ಇನ್ನೂ ಏನಾದರೂ ಏರಿಕೆಯಾದರೆ, ರೈತರ ಮುಖದಲ್ಲಿ ಮಂದಹಾಸ ದುಪ್ಪಟ್ಟಾಗಲಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಜೂನ್‌ನಲ್ಲೇ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಮತ್ತೆ ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕವೂ ಸಹ ಬೆಳೆಗಾರರನ್ನ ಕಾಡತೊಡಗಿದೆ.
ಭಾರೀ ಮಳೆ ಹಿನ್ನೆಲೆ ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಅದರಲ್ಲೂ ಈ ವೇಳೆಯೇ ದರ ಹೆಚ್ಚಳ ಆಗುತ್ತಿದ್ದು, ರೈತರು ಅಡಿಕೆಯನ್ನು ಒಳಗಿಸಲು ಹರಸಾಹಸ ಪಡುವಂತಾಗಿದೆ. ಯಾಕಂದ್ರೆ ಮತ್ತೆ ಯಾವಾಗ ಏರಿಕೆ ಆಗುತ್ತದೆಯೋ ಗೊತ್ತಿಲ್ಲ ಎನ್ನುವ ಭಯ ರೈತರಲಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಇನ್ನು ಇದೀಗ ಮಳೆ ತಗ್ಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಚುರುಕು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.











Click it and Unblock the Notifications