Arecanut Price: ಅಡಿಕೆ ಧಾರಣೆ ಭರ್ಜರಿ ಏರಿಕೆ! ಇಲ್ಲಿದೆ ಡಿಸೆಂಬರ್ 11ರ ದರಪಟ್ಟಿ
Arecanut Price: ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 11) ದರ ಎಷ್ಟಿದೆ ತಿಳಿಯಿರಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 11) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,289 ರೂಪಾಯಿ, ಕನಿಷ್ಠ ದರ 53,599 ರೂಪಾಯಿ ಇದ್ದು, ಸರಾಸರಿ ಬೆಲೆ 55,959 ರೂಪಾಯಿ ಇದೆ. ಹೀಗೆ ಧಾರಣೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಅಡಿಕೆ ಧಾರಣೆ ಇದೀಗ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಬಳಿಕ ತುಸು ಸುಧಾರಣೆ ಆಗಿ ಕೆಲವು ದಿನಗಳಿಂದ ಇಳಿಕೆಯತ್ತ ಹೊರಟಿತ್ತು. ಆದರೆ ಇದೀಗ ಸುಧಾರಣೆ ಆಗಿರುವುದು ಸಂತಸದ ವಿಚಾರವಾಗಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ 10ರ ವರೆಗೆ ಭಾರೀ ಇಳಿಕೆಯಾಗುತ್ತಲೇ ಬಂದಿತ್ತು. ಆದರೆ, ಇದೀಗ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಸಂತಸ ಮೂಡಿದಂತಾಗಿದೆ.
ಇನ್ನೂ ಈ ಬಾರಿ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಪರಿಣಾಮ ಅಡಿಕೆ ಫಸಲು ಕೂಡ ಅಷ್ಟೇ ಚೆನ್ನಾಗಿ ಬಂದಿದೆ. ಕಳೆದ ಕೆಲದ ದಿನಗಳಿಂದ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದ್ದು, ಬೆಳೆಗಾರರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿತ್ತು. ಆದರೆ ಇದೀಗ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ.
-
Adani: ವಿಕಲಚೇತನ ಛಾಯಾಗ್ರಾಹಕರಿಗಾಗಿ 'ಗ್ಲೋಬಲ್ ಎಬಿಲಿಟಿ ಫೋಟೋಗ್ರಫಿ ಚಾಲೆಂಜ್ 2026' ಘೋಷಣೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ









Click it and Unblock the Notifications