Arecanut Price: ಇಳಿಮುಖದತ್ತ ಸಾಗಿದ್ದ ಅಡಿಕೆ ಧಾರಣೆಯಲ್ಲಿ ಸುಧಾರಣೆ: ಇಲ್ಲಿದೆ ಡಿಸೆಂಬರ್ 22ರ ದರಪಟ್ಟಿ
Arecanut Price: ಕಳೆದ ಕೆಲವು ವಾರಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಸುಧಾರಣೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 22) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 22) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 55,899 ರೂಪಾಯಿ, ಕನಿಷ್ಠ ದರ 52,479 ರೂಪಾಯಿ ಇದ್ದು, ಸರಾಸರಿ ಬೆಲೆ 54,909 ರೂಪಾಯಿ ಆಗಿದೆ. ಕಳೆದ ಕೆಲ ವಾರಗಳಿಂದ ಕುಸಿತ ಕಂಡಿದ್ದ ಅಡಿಕೆ ಧಾರಣೆ ಇದೀಗ ಏರಿಕೆಯತ್ತ ಮುಖ ಮಾಡಿದೆ. ಇದರಿಂದ ಬೆಳೆಗಾರರಲ್ಲಿ ಮುಖದಲ್ಲಿ ಮಂದಹಾಸ ಮೂಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಕಳೆದ ಕೆಲ ದಿನಗಳಿಂದ ಹೀಗೆ ಇಳಿಮುಖ ಮಾಡಿದ್ದ ಇದೀಗ ಧಾರಣೆ ಇದೀಗ ಏರಿಕೆಯ ಓಟ ಮುಂದುವರೆಸಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಆದರೆ, ಇದೀಗ ಸುಧಾರಣೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತರಿಸಿದೆ. ಮುಂದಿನ ದಿನಗಳಲ್ಲಿ ಹೀಗೆ ಏರಿಕೆಯಾಗುವ ಭರವಸೆಯಲ್ಲಿದ್ದಾರೆ.
ಇದೀಗ ಸದ್ಯ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಅಲ್ಲಲ್ಲಿ ಮಾತ್ರ ಜಿನುಗು ಮಳೆ ಆಗುತ್ತಿದೆ. ಇದನ್ನು ಹೊರತುಪಡಿಸಿದ್ರೆ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದು, ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಅಲ್ಲದೆ, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಅದರಲ್ಲೂ ಈ ಬಾರಿ ಉತ್ತಮ ಮಳೆಯಾದ ಕಾರಣ ಅಡಿಕೆ ಫಸಲು ಕೂಡ ಚೆನ್ನಾಗಿ ಬಂದಿದೆ. ಆದರೆ, ಇದಕ್ಕೆ ತಕ್ಕಂತೆ ಬೆಲೆ ಇಲ್ಲ ಎನ್ನುವುದೇ ಬೇಸರದ ಸಂಗತಿಯಾಗಿದೆ.
-
ಡೈಲಿಹಂಟ್ ಮಾತೃಸಂಸ್ಥೆ 'ವರ್ಸ್ ಇನ್ನೋವೇಶನ್' ಆಡಳಿತ ಮಂಡಳಿಗೆ ಪಿ.ಆರ್. ರಮೇಶ್ ನೇಮಕ: ಆಡಳಿತಕ್ಕೆ ಹೊಸ ಬಲ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications