Arecanut Price: ಕ್ವಿಂಟಾಲ್ ಅಡಿಕೆ ಧಾರಣೆ ಮತ್ತೆ 60,000 ರೂಪಾಯಿ ಸಮೀಪದತ್ತ: ಇಲ್ಲಿದೆ ಡಿಸೆಂಬರ್ 25ರ ದರಪಟ್ಟಿ
Arecanut Price: ಕಳೆದ ಎರಡು ದಿನಗಳಿಂದ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 25) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 25) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,099 ರೂಪಾಯಿ, ಕನಿಷ್ಠ ದರ 51,879 ರೂಪಾಯಿ ಇದ್ದು, ಸರಾಸರಿ ಬೆಲೆ 55,911 ರೂಪಾಯಿ ಆಗಿದೆ. ಕಳೆದ ಕೆಲ ವಾರಗಳಿಂದ ಕುಸಿತ ಕಂಡಿದ್ದ ಅಡಿಕೆ ಧಾರಣೆ ಇದೀಗ ಏರಿಕೆಯತ್ತ ಮುಖ ಮಾಡಿದೆ. ಇದರಿಂದ ಬೆಳೆಗಾರರಲ್ಲಿ ಮುಖದಲ್ಲಿ ಮಂದಹಾಸ ಮೂಡಿದೆ.

ಈ ವರ್ಷದ ಅಡಿಕೆ ಧಾರಣೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ತಿಂಗಳವಾರು ಅಡಿಕೆ ಧಾರಣೆ: ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಕಳೆದ ಕೆಲ ದಿನಗಳಿಂದ ಹೀಗೆ ಇಳಿಮುಖ ಮಾಡಿದ್ದ ಇದೀಗ ಕಳೆದ ಎರಡು ದಿನಗಳಿಂದ ಧಾರಣೆ ಇದೀಗ ಭರ್ಜರ ಏರಿಕೆಯ ಓಟ ಮುಂದುವರೆಸಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ಎರಡು ದಿನಗಳಿಂದ ಧಾರಣೆ ಏರಿಕೆ: ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಆದರೆ, ಇದೀಗ ಕಳೆದ ಎರಡು ದಿನಗಳಿಂದ ಸುಧಾರಣೆ ಕಂಡಿದ್ದು, ಇದೀಗ ಇಂದು ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರಲ್ಲಿ ಸಂತಸ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆಯಲ್ಲಿದ್ದಾರೆ.
ಇದೀಗ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಅಲ್ಲಲ್ಲಿ ಮಾತ್ರ ಜಿನುಗು ಮಳೆ ಆಗುತ್ತಿದೆ. ಇದನ್ನು ಹೊರತುಪಡಿಸಿದರೆ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದು, ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಅಲ್ಲದೆ, ಹವಾಮಾನ ಇಲಾಖೆಯು ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇನ್ನೂ ಈ ಬಾರಿ ಉತ್ತಮ ಮಳೆ ಸುರಿದ ಕಾರಣ ಅಡಿಕೆ ಫಸಲು ಕೂಡ ಚೆನ್ನಾಗಿ ಬಂದಿದೆ. ಆದರೆ, ಇದಕ್ಕೆ ತಕ್ಕಂತೆ ಬೆಲೆ ಇಲ್ಲ ಎನ್ನುವ ಬೇಸರದಲ್ಲಿ ಅಡಿಕೆ ಬೆಳೆಗಾರರಿದ್ದರು. ಆದರೆ, ಇದೀಗ ಧಾರಣೆ ಏರಿಕೆಯತ್ತ ಸಾಗಿದ್ದು, ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದಾರೆ.
-
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications