Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಫೆಬ್ರವರಿ 9ರ ದರಪಟ್ಟಿ
Arecanut Price: ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಮತ್ತೆ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಫೆಬ್ರವರಿ 9) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ, ಇದೀಗ ಮತ್ತೆ ಏರಿಕೆಯಾಗಿದೆ.

ಅಡಿಕೆ ಧಾರಣೆ ಏರಿಕೆ: ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಫೆಬ್ರವರಿ 9) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,212 ರೂಪಾಯಿ, ಕನಿಷ್ಠ ದರ 53,039 ರೂಪಾಯಿ ಇದ್ದು, ಸರಾಸರಿ ಬೆಲೆ 55,944 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯಲ್ಲಿ ಏರಿಕೆ ಕಂಡಿದೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಆದರೆ ಇದೀಗ ಫೆಬ್ರವರಿ ಎರಡನೇ ವಾರದಲ್ಲಿ ಏರಿಕೆಯ ಓಟ ಮುಂದುವರೆಸಿದೆ.
ತಿಂಗಳವಾರು ಅಡಿಕೆ ದಾರಣೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಇನ್ನೂ ಇದೀಗ ಏರಿಕೆಯ ಓಟ ಮುಂದುವರೆಸಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಇದೀಗ ಫೆಬ್ರವರಿ ಎರಡನೇ ವಾರದಲ್ಲಿ ಏರಿಕೆಯಾಗಿದೆ.












Click it and Unblock the Notifications