Arecanut Price: ಕ್ವಿಂಟಾಲ್ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಜನವರಿ 8ರ ದರಪಟ್ಟಿ
Arecanut Price: ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಏರಿಕೆ ಆಗುತ್ತಲಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಜನವರಿ 8) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಕೊಯ್ಲು ಸಂಪೂರ್ಣವಾಗು ಮುಕ್ತಾಯ ಆಗಿದೆ. ಇದೇ ವೇಳೆ ಅಡಿಕೆ ದರ ಏರಿಕೆಯಾಗಿರುವುದು ಬೆಳೆಗಾರರಲ್ಲಿ ಮಂದಹಾ ಮೂಡಿದೆ. ಈ ವರ್ಷ ಕೆಲವರಿ ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದಾರೆ. ಆದರೆ, ಖೇಣಿ ಕೊಟ್ಟವರಿಗೆ ಸಲ್ಪ ಪ್ರಮಾಣದಲ್ಲಿ ನಷ್ಟ ಆಗುದೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣ ಇಳಿಕೆಯಾಗಿತ್ತು. ಬಳಿಕ ಏರಿಕೆಯಾಗಿದ್ದು, ಒಣ ಅಡಿಕೆ ಕೊಟ್ಟವರು ಕೂಡ ಲಾಭ ಗಳಿಸಿದ ಉದಾಹರಣೆಗಳಿವೆ. ಈ ನಡುವೆಯೇ ಕಳೆದ ಕೆಲ ದಿನಗಳಿಂದ ಮತ್ತೆ ಏರುಮುಖ ಮಾಡಿದೆ.

ಬೆಳೆಗಾರರ ಮುಖದಲ್ಲಿ ಮಂದಹಾಸ: ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಜನವರಿ 5) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,299 ರೂಪಾಯಿ, ಕನಿಷ್ಠ ದರ 50,200 ರೂಪಾಯಿ ಇದ್ದು, ಸರಾಸರಿ ಬೆಲೆ 57,784 ರೂಪಾಯಿ ಆಗಿದೆ. ಕಳೆದ ಒಂದು ವಾರದಿಂದ ಧಾರಣೆ ಏರಿಕೆಯತ್ತ ಸಾಗಿದ್ದು, ಇಂದು ಮತ್ತಷ್ಟು ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ.
ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. ಇದೀಗ ಸುಧಾರಣೆ ಆಗಿದ್ದು, 58,000 ರೂಪಾಯಿ ಗಡಿ ದಾಟಿದೆ. ಇದು ಹೀಗೆ ಸಾಗಿದರೆ, ಕೆಲವೇ ದಿನಗಳಲ್ಲಿ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಿ ಮತ್ತೆ 60,000 ರೂಪಾಯಿ ಗಡಿ ದಾಟುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ವರ್ಷ ಕೊಯ್ಲು ಆರಂಭದಿಂದಲೂ ದರದಲ್ಲಿ ಭಾರೀ ಏರಿಕೆಯಾಗಿತ್ತು. ಆದರೆ, ವರ್ಷದ ಕೊನೆ ತಿಂಗಳು ಅಂದರೆ ಡಿಸೆಂಬರ್ ಮಧ್ಯದವರೆಗೂ ಇಳಿಕೆ ಕಂಡಿದ್ದು, ಬೆಳೆಗಾರರಿಗೆ ಆತಂಕ ಹೆಚ್ಚಾಗಿತ್ತು. ಆದರೆ, ಇದೀಗ ಧಾರಣೆ ಏರಿಕೆಯತ್ತ ಹೊರಟಿರುವ ಕಾರಣ ಅವರ ಮುಖದಲ್ಲಿದ್ದ ಆತಂಕ ದೂರ ಆದಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ತಿಂಗಳವಾರು ಅಡಿಕೆ ದಾರಣೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆಯಾಗಿತ್ತು. ಇದೀಗ 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಇದೀಗ ಈ ವರ್ಷದ 8ನೇ ದಿನವೂ ಭರ್ಜರಿ ಏರಿಕೆಯಾಗಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಲೇ ಬಂದಿತ್ತು. ಆದರೆ, 2026ರ ಜನವರಿ ಆರಂಭದಿಂದಲೂ ಭರ್ಜರಿ ಏರಿಕೆಯ ಓಟ ಮುಂದುವರೆದಿದೆ. ಇದರಿಂದ ಬೆಳೆಗಾರರಲ್ಲಿ ಸಂತಸ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆ ರೈತರದ್ದಾಗಿದೆ.












Click it and Unblock the Notifications