Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ ಧಾರಣೆ ಸುಧಾರಣೆ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ತುಸು ಮಂದಹಾಸ ಮೂಡಿದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಮಾರ್ಚ್ 26) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ, ಇದೀಗ ತುಸು ಕಂಡಿದ್ದು, ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಸಂತಸ ಮತ್ತೆ ಬಂದಂತಾಗಿದೆ.

ಅಡಿಕೆ ಧಾರಣೆ ಏರಿಕೆ
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಮಾರ್ಚ್ 19) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 54,700 ರೂಪಾಯಿ, ಕನಿಷ್ಠ ದರ 36,000 ರೂಪಾಯಿ ಇದ್ದು, ಸರಾಸರಿ ಬೆಲೆ 52,230 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯು ಕಳೆದ ಕೆಲವು ದಿನಗಳಿಗೆ ಹೋಲಿಕೆ ತುಸು ಏರಿಕೆ ಕಂಡಿದೆ. 60,000 ರೂಪಾಯಿ ಮುಟ್ಟುತ್ತದೆ ಎನ್ನುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಬಳಿಕ, ಫೆಬ್ರವರಿ ಮೂರನೇ ವಾರದವರೆಗೂ ಧಾರಣೆಯಲ್ಲಿ ಸುಧಾರಣೆ ಕಂಡಿತ್ತು. ಆದರೆ, ಕೊನೆ ವಾರದಲ್ಲಿ ಮತ್ತೆ ಕುಸಿತ ಕಂಡಿತ್ತು. ಇದೀಗ ಮಾರ್ಚ್ 26ರಂದು ತುಸು ಏರಿಕೆಯಾಗಿದೆ.
ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಇದೀಗ ಮಾರ್ಚ್ 26ರಂದು ಏರಿಕೆ ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications