Arecanut price: ಕ್ವಿಂಟಾಲ್ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ನವೆಂಬರ್ 10ರ ದರಪಟ್ಟಿ
Arecanut Price: ರಾಜ್ಯದಲ್ಲಿ ಕೆಳೆದ ಮೂರು ವಾರ ಇಳಿಕೆಯತ್ತ ಹೊರಟಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾದಂತಾಗಿದೆ. ಹಾಗಾದ್ರೆ ಪ್ರಸ್ತುತ ದರಪಟ್ಟಿ ಎಷ್ಟಿದ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ಸದ್ಯ ಕೊಯ್ಲಿನ ಸಮಯವಾಗಿದ್ದು, ಈ ವೇಳೆಯೇ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿರುವುದು ಬೆಳೆಗಾರರಲ್ಲಿ ಮುಖದಲ್ಲಿ ಸಂತಸ ತರಿಸಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ನವೆಂಬರ್ 10) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು (ನವೆಂಬರ್ 10) ಸಹ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,791 ರೂಪಾಯಿ, ಕನಿಷ್ಠ ದರ 55,329 ರೂಪಾಯಿ ಇದ್ದು, ಸರಾಸರಿ ಬೆಲೆ 57,708 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 70,000 ಸಮೀಪದತ್ತ ಹೊರಟಿತ್ತು. ಆದರೆ, ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿತ್ತು. ಇದೀಗ ಮತ್ತೆ ಚೇತರಿಕೆ ಕಂಡಿದೆ.
ಸದ್ಯ ಅಡಿಕೆ ಧಾರಣೆ ತುಸು ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ದೀಪಾವಳಿ ಸಮಯದಲ್ಲಿ ಅಂದರೆ ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಆದರೆ ಇದೀಗ ಮತ್ತೆ ಏರಿಕೆಯತ್ತ ಹೊರಟಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಎರಡನೇ ವಾರದಿಂದ ನಾಲ್ಕನೆ ವಾರದ ಆರಂಭದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ಮತ್ತೆ ಏರುಮುಖ ಮಾಡಿದೆ.
2025ರ ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಅಡಿಕೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಮತ್ತೊಂದೆಡೆ ಕಳೆದ ಕೆಲ ದಿನಗಳಿಂದ ಸತತ ಇಳಿಕೆ ಕಂಡಿದ್ದ ಧಾರಣೆ ಇದೀಗ ಸುಧಾರಣೆ ಆಗಿದೆ. ಇದರಿಂದ ಅಡಿಕೆ ಬೆಳೆಗಾರರಲ್ಲಿದ್ದ ಆತಂಕ ದೂರ ಆದಂತಾಗಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications