Arecanut price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಅಕ್ಟೋಬರ್ 17ರ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿ ಹಿಡಿದಿದೆ. ಇನ್ನೂ ಇದೀಗ ದೀಪಾವಳಿ ಹತ್ತಿರ ಬರುತ್ತಿದ್ದಂತೆ ನಿರೀಕ್ಷೆಗೂ ಮೀರಿ ಏರಿಕೆ ಆಗಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಹಾಗಾದ್ರೆ ಪ್ರಸ್ತುತ ದರಪಟ್ಟಿ ಎಷ್ಟಿದ ಎನ್ನುವ ಸಂಪೂರ್ಣ ಅಂಕಿಅಂಶಗಳವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೊಯ್ಲಿನ ಸಮಯದಲ್ಲೇ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿದೆ. ಇನ್ನು ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಅಕ್ಟೋಬರ್ 17) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 17) ಕೂಡ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 67,569 ರೂಪಾಯಿ, ಕನಿಷ್ಠ ದರ 60,019 ರೂಪಾಯಿ ಇದ್ದು, ಸರಾಸರಿ ಬೆಲೆ 66,857 ರೂಪಾಯಿ ಇದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ನಂತರ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರಿಕೆಯ ಓಟ ಮುಂದುವರೆದಿದೆ.
ಕಳೆದ ವಾರದಂತೆ ಇದೀಗ ಅಡಿಕೆ ಧಾರಣೆ ನಿನ್ನೆಯದ್ದೇ ಇದ್ದೂ, ಸ್ಥಿರತೆ ಕಾಯ್ದುಕೊಂಡಿದೆ. ಮುಂದಿನ ದಿನಗಳಲ್ಲಿ ಭಾರೀ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ದೀಪಾವಳಿ ಸಮಯದಲ್ಲೇ 68,000 ರೂಪಾಯಿ ಸಮೀಪದತ್ತ ಬಂದಿದೆ. ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟಿದರೂ ಆಶ್ಚರ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಯಾಕಂದ್ರೆ, ಕಳೆದ ಒಂದು ತಿಂಗಳಿನಿಂದಲೂ ಧಾರಣೆ ಏರಿಕೆಯ ಓಟವನ್ನೇ ಮುಂದುವರೆಸಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ನಂತರ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಎರಡನೇ ವಾರದಿಂದ ಇಲ್ಲಿಯವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿದೆ. ಎರಡು ದಿನ ಸ್ಥಿರತೆ ಕಾಯ್ದುಕೊಂಡರೆ, ಬಳಿಕ ಮತ್ತೆ ಏರಿಕೆಯಾಗುತ್ತಲಿದೆ.
2025ರ ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಅಡಿಕೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಮತ್ತೊಂದೆಡೆ ಹೆಚ್ಚು ಮಳೆಯಾದ ಕಾರಣ ಶೀತದಿಂದ ಇಳುವರಿ ಕಡಿಮೆಯೂ ಆಗಿದೆ. ಇದೇ ವೇಳೆ ಧಾರಣೆ ಏರುಗತಿಯಲ್ಲಿ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತೆ ಭಾರೀ ಏರಿಕೆಯಾಗುವ ಭರವಸೆ ಅಡಿಕೆ ಬೆಳೆಗಾರರದ್ದಾಗಿದೆ. ಇದೀಗ ಸದ್ಯ ನಿನ್ನೆ ಧಾರಣೆಯೇ ಮುಂದುವರೆದಿದೆ.












Click it and Unblock the Notifications