Arecanut price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಅಕ್ಟೋಬರ್ 5ರ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆಯಲ್ಲಿ ಹಾವು ಏಣಿಯಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಅಕ್ಟೋಬರ್ 5) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ನೀಡಲಾಗಿದೆ ಕಣ್ಣಾಡಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 5) ಕ್ವಿಂಟಾಲ್ ಅಡಿಕೆ ಗರಿಷ್ಠ ದರ 64,329 ರೂಪಾಯಿ ಆಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಮತ್ತಷ್ಟು ಹೆಚ್ಚಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿದ್ದಾರೆ.

ಪ್ರಸ್ತುತ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 64,329 ರೂಪಾಯಿ, ಕನಿಷ್ಠ ದರ 57,100 ರೂಪಾಯಿ ಇದ್ದು, ಸರಾಸರಿ ಬೆಲೆ 64,099 ರೂಪಾಯಿ ಆಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಬಳಿಕ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರಿಕೆಯ ಹಾದಿ ಹಿಡಿದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ 65,000 ರೂಪಾಯಿ ಗಡಿ ಸಮೀಪದಲ್ಲಿದೆ.
ಮೇ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಬಳಿಕ ಸೆಪ್ಟೆಂಬರ್ ಅಂತ್ಯದವರೆಗೂ ಏರಿಕೆಯಾಗುತ್ತಾ ಬಂದಿದೆ. ಆದರೆ, ಇದೀಗ ಅಕ್ಟೋಬರ್ ಆರಂಭದಿಂದಲೂ ಮತ್ತೆ ಭರ್ಜರಿ ಏರಿಕೆ ಆಗುತ್ತಿದ್ದು, ಇದು ರೈತರ ಮುಖದಲ್ಲಿನ ಮಂದಹಾಸವನ್ನು ಎರಡು ಪಟ್ಟು ಹೆಚ್ಚಾಗುವಂತೆ ಮಾಡಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರು ಇದ್ದಾರೆ.
ಈ ಬಾರಿ ವಾಡಿಕೆಯಂತೆ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಇನ್ನೂ ಕೆಲವೆಡೆ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸಂಭವಿಸಿವೆ. ಮತ್ತೊಂದೆಡೆ ಉತ್ತಮ ಮಳೆ ಹಿನ್ನೆಲೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದ್ದು, ಬೆಲೆಯೂ ಭಾರೀ ಏರಿಕೆಯತ್ತ ಹೊರಟಿದೆ. ಮುಂದಿನ ದಿನಗಳಲ್ಲಿ ಮತ್ತೆ ಇದು ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications