Arecanut price: ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಅಕ್ಟೋಬರ್ 7ರ ದರಪಟ್ಟಿ

Arecanut Price: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ, ಇದೀಗ ಕೆನೆಗೂ 65,000 ರೂಪಾಯಿ ಗಡಿ ದಾಡಿದೆ. ಕಳೆದ ಸೆಪ್ಟೆಂಬರ್‌ಗೆ ಹೋಲಿಕೆ ಮಾಡಿದ್ರೆ ಅಕ್ಟೋಬರ್ ಭಾರೀ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.

ರಾಜ್ಯದಲ್ಲಿ ಅಡಿಕೆ ಧಾರಣೆ ಕಳೆದ ಕೆಲ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇದೀಗ ಅಕ್ಟೋಬರ್ 2ನೇ ವಾರ ಸಮೀಪಿಸುತ್ತಿದ್ದಂತೆ ಭರ್ಜರಿ ಏರಿಕೆಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ ಇಂದು (ಅಕ್ಟೋಬರ್ 7) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.

Arecanut Price increased on October 7 Know details

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 7) ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 65,009 ರೂಪಾಯಿಗೆ ಏರಿಕೆ ಆಗಿದೆ. ಕಳೆದ ಒಂದು ವಾರದಿಂದಲೂ ಸ್ಥಿರತೆ ಕಾಯ್ದುಕೊಂಡಿದ್ದ ಇದೀಗ ಭರ್ಜರಿ ಏರಿಕೆ ಆಗಿದ್ದು, ಬೆಳೆಗಾರರ ಭರವಸೆ ನಿಜ ಆದಂತಾಗಿದೆ. ಆದರೆ, ಇದೇ ಸಮಯದಲ್ಲಿ ಇಳುವರಿ ಕುಸಿತಗೊಂಡಿದೆ.

ಪ್ರಸ್ತುತ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 65,009 ರೂಪಾಯಿ, ಕನಿಷ್ಠ ದರ 60,021 ರೂಪಾಯಿ ಇದ್ದು, ಸರಾಸರಿ ಬೆಲೆ 63,653 ರೂಪಾಯಿ ಇದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಬಳಿಕ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರುಮುಖದತ್ತ ಓಟ ಮುಂದುವರೆಸಿದೆ. ಈ ವರ್ಷದಲ್ಲಿ ಇಲ್ಲಿವರೆಗೂ ಗರಿಷ್ಠ ದರ ದಾಖಲೆಯ ಏರಿಕೆಯಾಗಿರುವುದು ಇದೇ ಮೊದಲು.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಅಕ್ಟೋಬರ್ ಎರಡನೇ ವಾರ ಸಮೀಪಿಸುತ್ತಿದ್ದಂತೆ 65,000 ರೂಪಾಯಿ ಗಡಿ ದಾಟಿದೆ.

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಸಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್‌ ಮೊದಲ ವಾರದಲ್ಲಿ ಸತತವಾಗಿ ಏರಿಕೆಯಾಗುತ್ತಾ ಬಂದಿದೆ. ಇನ್ನು ಈ ಬಾರಿ ಹೆಚ್ಚು ಮಳೆಯಾದ ಕಾರಣ ಅಡಿಕೆ ಇಳುವರಿ ತುಸು ಕುಸಿತ ಕಂಡಿದೆ. ಮತ್ತೊಂದೆಡೆ, ಕೊಯ್ಲು ಬರದಿಂದ ಸಾಗಿದೆ.

ಈ ಬಾರಿ ರಾಜ್ಯಕ್ಕೆ ವಾಡಿಕೆಯಂತೆ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಈ ಹಿನ್ನೆಲೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಇದೀಗ ಸದ್ಯ ಧಾರಣೆ ಏರುಗತಿಯಲ್ಲಿಯಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುವ ಭರವಸೆ ಅಡಿಕೆ ಬೆಳೆಗಾರರದ್ದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+