Arecanut price: ಸೆಪ್ಟೆಂಬರ್ 18ರಂದು ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆಯಲ್ಲಿ ಹಾವು ಏಣಿಯಂತೆ ಏರಿಳಿತ ಆಗುತ್ತಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಸೆಪ್ಟೆಂಬರ್ 18) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ನೀಡಲಾಗಿದೆ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 18) ಕ್ವಿಂಟಾಲ್ ಅಡಿಕೆ ಗರಿಷ್ಠ ದರ 60,299 ರೂಪಾಯಿ ಆಗಿದೆ. ಏರಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಇದೀಗ ಇಳಿಕೆಯತ್ತ ಸಾಗಿದ್ದು, ಇದರಿಂದ ಬೆಳೆಗಾರರ ಮಂದಹಾಸವನ್ನು ಕಸಿದಂಯತಾಗಿದ್ದು, ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,299 ರೂಪಾಯಿ, ಕನಿಷ್ಠ ದರ 51,000 ರೂಪಾಯಿ ಇದ್ದು, ಸರಾಸರಿ ಬೆಲೆ 58,599 ರೂಪಾಯಿ ಆಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಬಳಿಕ ಏರಿಕೆಯಾಗಿ ಮತ್ತೆ ಇಳಿಕೆಯತ್ತ ಸಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಕಳೆದ ಕೆಲವು ದಿನಗಳಿಂದ 65,000 ರೂಪಾಯಿ ದಾಟಿ ಇದೀಗ ತುಸು ಇಳಿಕೆಯಾಗಿದೆ.
ಮೇ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ ಇದೀಗ ಸೆಪ್ಟೆಂಬರ್ ಮೂರನೇ ವಾರದ ಅಂತ್ಯದಲ್ಲಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಕೆಯತ್ತ ಹೊರಟಿದೆ.
ರಾಜ್ಯಕ್ಕೆ ಈ ಬಾರಿ ವಾಡಿಕೆಯಂತೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ ನೋಡೋದಾದ್ರೆ, ಸರಿಯಾದ ಸಮಯಕ್ಕೆ ಮಳೆಯಾದ ಕಾರಣ ಉತ್ತಮ ಫಸಲೇನೋ ಬಂದಿದೆ. ಆದರೆ, ಬೆಳೆಗಾರರು ನಿರೀಕ್ಷೆ ಮಾಡಿದಷ್ಟು ಬೆಲೆ ಸಿಗುತ್ತಿಲ್ಲ ಎನ್ನುವುದೇ ಅಸಮಾಧಾನಕರ ಸಂಗತಿ ಆಗಿದೆ.
ದರದಲ್ಲಿ ಭಾರೀ ಪ್ರಮಾಣದಲ್ಲಿ ಇಳಕೆಯಾಗುತ್ತಿದೆ ಹೊರತು, ಏರಿಕೆಯಾದ್ರೆ ಜಾಸ್ತಿ ಆಗುತ್ತಿಲ್ಲ ಎನ್ನುವುದು ಅಡಿಕೆ ಬೆಳೆಗಾರರ ಕೊರಗಾಗಿದೆ. ಇದೀಗ ಮತ್ತೆ ಇಳಿಕೆಯತ್ತ ಹೊರಟಿದ್ದು, ಮುಂದಿನ ದಿಮಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಅಡಿಕೆ ಬೆಳೆಗಾರರಲ್ಲಿ ಕಾಡುತ್ತಿದೆ.












Click it and Unblock the Notifications