Arecanut price: ಸೆಪ್ಟೆಂಬರ್ ನಾಲ್ಕನೇ ವಾರದ ಮಧ್ಯದಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ದರದಲ್ಲಿ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಸೆಪ್ಟೆಂಬರ್ 21) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ನೀಡಲಾಗಿದೆ ಗಮನಿಸಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 21) ಕ್ವಿಂಟಾಲ್ ಅಡಿಕೆ ಗರಿಷ್ಠ ದರ 60,899 ರೂಪಾಯಿ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದರೆ, ಈ ದರ ಹೆಚ್ಚಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಮರುಕಳಿಸಿದಂತಾಗಿದೆ. ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

ಪ್ರಸ್ತುತ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,899 ರೂಪಾಯಿ, ಕನಿಷ್ಠ ದರ 51,000 ರೂಪಾಯಿ ಇದ್ದು, ಸರಾಸರಿ ಬೆಲೆ 60,499 ರೂಪಾಯಿ ಆಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತುಯ. ಬಳಿಕ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರಿಕೆಯತ್ತ ಮುಖ ಮಾಡಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಕಳೆದ ಕೆಲ ದಿನಗಳಿಂದ 65,000 ರೂಪಾಯಿವರೆಗೂ ಬಂದು ಇಳಿಕೆಯಾಗಿ, ಮತ್ತೆ ಇದರೊಳಗೆ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿದೆ.
ಮೇ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟ್ಟಿತ್ತು. ಆದರೆ, ಇದೀಗ ನಾಲ್ಕನೇ ವಾರದಲ್ಲಿ ಭರ್ಜರಿ ಏರಿಕೆ ಆಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸವೂ ಹೆಚ್ಚಾಗಿದೆ.
ಇನ್ನಯ ಈ ಬಾರಿ ವಾಡಿಕೆಯಂತೆ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಉತ್ತಮ ಮಳೆ ಹಿನ್ನೆಲೆ ಫಸಲು ಕೂಡ ಅಷ್ಟೇ ಚೆನ್ನಾಗಿಯೇನೋ ಬಂದಿದೆ. ಆದರೆ, ಬೆಳೆಗಾರರು ನಿರೀಕ್ಷೆ ಮಾಡಿದಷ್ಟು ಬೆಲೆ ಸಿಗುತ್ತಿಲ್ಲ ಎನ್ನುವುದೇ ಅಸಮಾಧಾನಕರ ಸಂಗತಿ. ಮತ್ತೊಂದೆಡೆ, ಅಡಿಕೆಯನ್ನು ಒಣಗಿಸಿ ರಕ್ಷಣೆ ಮಾಡಿಕೊಳ್ಳುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ.












Click it and Unblock the Notifications