Arecanut price: ಕ್ವಿಂಟಾಲ್‌ ಅಡಿಕೆ ಧಾರಣೆ ದಾಖಲೆ ಮಟ್ಟದಲ್ಲಿ ಏರಿಕೆ: ಇಲ್ಲಿದೆ ಸೆಪ್ಟೆಂಬರ್ 23ರ ದರಪಟ್ಟಿ

Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆಯಲ್ಲಿ ಹಾವು ಏಣಿಯಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಸೆಪ್ಟೆಂಬರ್‌ 23) ಕ್ವಿಂಟಾಲ್‌ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ನೀಡಲಾಗಿದೆ ಕಣ್ಣಾಡಿಸಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 23) ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 61,099 ರೂಪಾಯಿಗೆ ಏರಿಕೆ ಆಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಹೆಚ್ಚಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿ ಇದ್ದಾರೆ.

Arecanut Price increased on September 23 Know Complete details

ಪ್ರಸ್ತುತ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 61,099 ರೂಪಾಯಿ, ಕನಿಷ್ಠ ದರ 56,100 ರೂಪಾಯಿ ಇದ್ದು, ಸರಾಸರಿ ಬೆಲೆ 60,599 ರೂಪಾಯಿಗೆ ಏರಿಕೆಯಾಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಬಳಿಕ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರಿಕೆಯಾಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಕಳೆದ ಕೆಲವು ದಿನಗಳಿಂದ 65,000 ರೂಪಾಯಿವರೆಗೂ ಬಂದು ಇಳಿಕೆಯಾಗಿ, ಮತ್ತೆ ಇದರೊಳಗೆ ಏರಿಳಿತ ಆಗುತ್ತಲಿದೆ.

ಮೇ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಮುಖದತ್ತ ಸಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್‌ ನಾಲ್ಕನೇ ವಾರದ ಕೊನೆಯಲ್ಲಿ ಭರ್ಜರಿ ಏರಿಕೆ ಆಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ದುಪ್ಪಟ್ಟಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

ಇನ್ನು ಈ ಬಾರಿ ರಾಜ್ಯಕ್ಕೆ ವಾಡಿಕೆಯಂತೆ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಉತ್ತಮ ಮಳೆಯಾದ ಹಿನ್ನೆಲೆ ಫಸಲು ಕೂಡ ಅಷ್ಟೇ ಚೆನ್ನಾಗಿಯೇನೋ ಬಂದಿದೆ. ಆದರೆ, ಬೆಳೆಗಾರರು ನಿರೀಕ್ಷೆ ಮಾಡಿದಷ್ಟು ಬೆಲೆ ಸಿಗುತ್ತಿಲ್ಲ ಎನ್ನುವುದೇ ಅಸಮಾಧಾನಕರ ಸಂಗತಿ ಆಗಿದೆ. ಸಂತಸ ಅಂದ್ರೆ, ಇಳಿಕೆಯತ್ತ ಹೊರಟಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆ ಹಾದಿ ಹಿಡಿದಿರುವುದು.

ಇದೀಗ ಅಡಿಕೆ ಧಾರಣೆ ಸದ್ಯ ಏರುಗತಿಯಲ್ಲಿಯಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಇದು ಮುಂದುವರೆಯುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಅಡಿಕೆ ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎನ್ನುವ ಆತಂಕ ರೈತರಲ್ಲಿದೆ. ಅದರಲ್ಲೂ ಮಲೆನಾಡು ಭಾಗದ ರೈತರಿಗೆ ಈ ದುಗುಡ ಹೆಚ್ಚಾಗಿದೆ. ಯಾಕಂದ್ರೆ, ಈ ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿರುವ ಕಾರಣ ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+