Arecanut price: ಸೆಪ್ಟೆಂಬರ್ 26ರಂದು ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ದರಪಟ್ಟಿ
Arecanut Price: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಡಿಕೆ ದರದಲ್ಲಿ ಏರಿಕೆಯಾಗುತ್ತಲಿದೆ.
ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಸೆಪ್ಟೆಂಬರ್ 26) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಜಿಲ್ಲೆಯಲ್ಲಿಂದು (ಸೆಪ್ಟೆಂಬರ್ 26) ಕ್ವಿಂಟಾಲ್ ಅಡಿಕೆ ಗರಿಷ್ಠ ದರ 62,899 ರೂಪಾಯಿ ಆಗಿದೆ. ಕಳೆದ ಎರಡು ದಿನಗಳಿಂದಲೂ ಇದೇ ದರ ಮುಂದುವರೆದಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಿದಂತಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.

ಪ್ರಸ್ತುತ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 62,899 ರೂಪಾಯಿ, ಕನಿಷ್ಠ ದರ 52,012 ರೂಪಾಯಿ ಇದ್ದು, ಸರಾಸರಿ ಬೆಲೆ 61,299 ರೂಪಾಯಿ ಆಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಬಳಿಕ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರಿಕೆಯಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಕಳೆದ ಕೆಲವು ದಿನಗಳಿಂದ 65,000 ರೂಪಾಯಿವರೆಗೂ ಬಂದು ಇಳಿಕೆಯಾಗಿ, ಮತ್ತೆ ಇದರೊಳಗೆ ಏರಿಳಿತ ಆಗುತ್ತಲಿದೆ.
ಮೇ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆಯಾಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟ್ಟಿತ್ತು. ಆದರೆ, ನಾಲ್ಕನೇ ವಾರದಿಂದಲೂ ತಿಂಗಳ ಅಂತ್ಯದವರೆಗೂ ಸತತವಾಗು ಏರಿಕೆಯಾಗುತ್ತಲೇ ಬಂದಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ದುಪ್ಪಟ್ಟಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆ ರೈತರದ್ದಾಗಿದೆ.
ರಾಜ್ಯಕ್ಕೆ ಈ ಬಾರಿ ವಾಡಿಕೆಯಂತೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆ ಫಸಲು ಕೂಡ ಅಷ್ಟೇ ಚೆನ್ನಾಗಿಯೇನೋ ಬಂದಿದೆ. ಆದರೆ, ಬೆಳೆಗಾರರು ನಿರೀಕ್ಷೆ ಮಾಡಿದಷ್ಟು ಬೆಲೆ ಸಿಗುತ್ತಿಲ್ಲ ಎನ್ನುವುದೇ ಅಸಮಾಧಾನಕರ ಸಂಗತಿಯಾಗಿದೆ. ಇದೀಗ ದರ ಸದ್ಯ ಏರುಗತಿಯಲ್ಲಿಯಲ್ಲಿ ಸಾಗಿತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಇದೇ ಮುಂದುವರೆಯುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಅಡಿಕೆ ರಕ್ಷಣೆ ಮಾಡಿಕೊಳ್ಳುವುದೇಗೆ ಎನ್ನುವ ಆತಂಕ ಕೂಡ ಮನೆ ಮಾಡಿದೆ.












Click it and Unblock the Notifications