Arecanut price: ಸೆಪ್ಟೆಂಬರ್ 29ರಂದು ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ದರಪಟ್ಟಿ

Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆಯಲ್ಲಿ ಭರ್ಜರಿ ಏರಿಕೆಯ ಹಾದಿ ಹಿಡಿದಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಸೆಪ್ಟೆಂಬರ್‌ 29) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ನೀಡಲಾಗಿದೆ ಕಣ್ಣಾಡಿಸಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 28) ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 63,869 ರೂಪಾಯಿಗೆ ಇದೆ. ಕಳೆದ ಮೂರು ದಿನಗಳಿಂದಲೂ ಇದೇ ದರ ಕಾಯ್ದುಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಭಾರೀ ಏರಿಕೆ ಆಗಯವ ಭರವಸೆಯಲ್ಲಿ ಬೆಳೆಗಾರರು ಇದ್ದಾರೆ.

Arecanut Price increased on September 29 Know details

ಪ್ರಸ್ತುತ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 63,869 ರೂಪಾಯಿ, ಕನಿಷ್ಠ ದರ 57,000 ರೂಪಾಯಿ ಇದ್ದು, ಸರಾಸರಿ ಬೆಲೆ 63,099 ರೂಪಾಯಿ ಇದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತುಯ. ಬಳಿಕ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರುಮುಖದತ್ತ ಓಟ ಮುಂದುವರೆಸಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಕಳೆದ ಕೆಲವು ದಿನಗಳಿಂದ 65,000 ರೂಪಾಯಿವರೆಗೂ ಬಂದು ಇಳಿಕೆಯಾಗಿ, ಮತ್ತೆ ಇದರೊಳಗೆ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿದೆ.

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಸಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟ್ಟಿತ್ತು. ಬಳಿಕ ನಾಲ್ಕನೇ ವಾರದ ಮಧ್ಯದಲ್ಲಿದ್ದ ಭರ್ಜರಿ ಏರಿಕೆಯಾಗಿದ್ದು, ಈಗಲೂ ಅದೇ ದರ ಮುಂದುರೆದಿದೆ.

ಈ ಬಾರಿ ರಾಜ್ಯಕ್ಕೆ ವಾಡಿಕೆಯಂತೆ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಈ ಹಿನ್ನೆಲೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಇನ್ನು ಇದೀಗ ಸದ್ಯ ಅಡಿಕೆ ಧಾರಣೆ ಏರುಗತಿಯಲ್ಲಿಯಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದೇ ದರ ಮುಂದುವರೆಯುವ ಭರವಸೆ ಅಡಿಕೆ ಬೆಳೆಗಾರರದ್ದಾಗಿದೆ. ಮತ್ತೊಂದೆಡೆ ಅಡಿಕೆ ರಕ್ಷಣೆ ಮಾಡಿಕೊಳ್ಳುವುದು ಬೆಳಗಾರರಿಗೆ ದೊಡ್ಡ ತಲೆನೋವಾಗಿಬಿಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+