Arecanut price: ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ: ಸೆಪ್ಟೆಂಬರ್ 4ರ ದರ ಎಷ್ಟಿದೆ ತಿಳಿಯಿರಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆಯತ್ತ ಸಾಗುತ್ತಾ ಬಂದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆಯನ್ನ ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 4) ಪ್ರಸ್ತುತ ದರ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದಿನ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 60,311 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಮರುಕಳಿಸಿದಂತಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,311 ರೂಪಾಯಿ, ಕನಿಷ್ಠ ದರ 49,319 ರೂಪಾಯಿ ಇದ್ದು, ಸರಾಸರಿ ಬೆಲೆ 59,599 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗೆ ಇಳಿದಿತ್ತು. ಆದರೆ, ಇದೀಗ ಏರಿಕೆಯತ್ತ ಹೊರಟಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಾ ಬಂದಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಆದರೆ, ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗಿ ಮತ್ತೆ ಇಳಿಮುಖದತ್ತ ಸಾಗಿದೆ. ಆದರೆ, ಕಳೆದ ತಿಂಗಳು ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಜೂನ್‌ನಲ್ಲೇ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಮತ್ತೆ ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಅಡಿಕೆ ಬೆಳೆಗಾರದ್ದಾಗಿದೆ.
ಭಾರೀ ಮಳೆ ಹಿನ್ನೆಲೆ ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಅದರಲ್ಲೂ ಈ ವೇಳೆಯೇ ದರ ಹೆಚ್ಚಳ ಆಗುತ್ತಿದ್ದು, ರೈತರು ಅಡಿಕೆ ಒಳಗಿಸಲು ಹರಸಾಹಸ ಪಡುವಂತಾಗಿದೆ. ಯಾಕಂದ್ರೆ ಮತ್ತೆ ಯಾವಾಗ ಏರಿಕೆ ಆಗುತ್ತದೆಯೋ ಗೊತ್ತಿಲ್ಲ ಎನ್ನುವ ಭಯ ರೈತರಲಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮುಂದಿನ ದಿನಗಳಲ್ಲಿ ಮತ್ತೆ ವರುಣ ಆರ್ಭಟ ಶುರು ಮಾಡಲಿದ್ದಾನೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಭಾರೀ ಮಳೆಯಿಂದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ನಡೆದುಹೋಗಿವೆ.












Click it and Unblock the Notifications