Arecanut price: ಸೆಪ್ಟೆಂಬರ್‌ 6ರಂದು ಅಡಿಕೆ ಧಾರಣೆ ಎಷ್ಟಿದೆ?

Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಳಿತ ಆಗುತ್ತಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆಯನ್ನ ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್‌ 6) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 6) ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 59,299 ರೂಪಾಯಿ ಆಗಿದೆ. ಏರಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಇಳಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸವನ್ನು ಕಿತ್ತುಕೊಂಡಿದೆ. ಮತ್ತೊಂದೆಡ ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ರೈತಲಿದ್ದಾರೆ.

Arecanut price increased on September 6 in Davanagere district Know details

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,299 ರೂಪಾಯಿ, ಕನಿಷ್ಠ ದರ 53,012 ರೂಪಾಯಿ ಇದ್ದು, ಸರಾಸರಿ ಬೆಲೆ 56,203 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗೆ ಇಳಿದಿತ್ತು. ಬಳಿಕ ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಲಿತ್ತು. ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.

ಆದರೆ, ಮೇ ಆರಂಭದಿಂದಲೂ ಜೂನ್‌ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗಿ ಮತ್ತೆ ಇಳಿಮುಖದತ್ತ ಸಾಗಿದೆ. ಆದರೆ, ಕಳೆದ ತಿಂಗಳು ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಇಳಿಕೆಯಾಗಿದೆ.

2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಜೂನ್‌ನಲ್ಲೇ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಅಡಿಕೆ ಬೆಳೆಗಾರರಲ್ಲಿ ಕಾಡುತ್ತಿದೆ. ಭಾರೀ ಮಳೆ ಹಿನ್ನೆಲೆ ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+