Arecanut price: ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಸೆಪ್ಟೆಂಬರ್ 9ರ ದರಪಟ್ಟಿ
Arecanut Price: ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಮತ್ತೆ ಏರಿಕೆಯತ್ತ ಹೊರಟಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ತೆಗದುಕೊಂಡು ಹೋಗೋದು. ಹಾಗಾದ್ರೆ ಇಂದು (ಸೆಪ್ಟೆಂಬರ್ 9) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 9) ಕ್ವಿಂಟಾಲ್ ಅಡಿಕೆ ಗರಿಷ್ಠ ದರ 59,669 ರೂಪಾಯಿ ಆಗಿದೆ. ಏರಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಇಳಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸವನ್ನು ಕಿತ್ತುಕೊಂಡಿದೆ. ಮತ್ತೊಂದೆಡ ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ರೈತಲಿದ್ದಾರೆ.

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,669 ರೂಪಾಯಿ, ಕನಿಷ್ಠ ದರ 52,149 ರೂಪಾಯಿ ಇದ್ದು, ಸರಾಸರಿ ಬೆಲೆ 55,454 ರೂಪಾಯಿ ಆಗಿದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗೆ ಇಳಿದಿತ್ತು. ಬಳಿಕ ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಏರಿಕೆಯತ್ತ ಹೊರಟಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಲಿತ್ತು. ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಮೇ ಆರಂಭದಿಂದಲೂ ಜೂನ್ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟ್ಟಿತ್ತು. ಆದರೆ ಇದೀಗ ಎರಡನೇ ವಾರದಲ್ಲಿ ಮತ್ತೆ ಏರಿಕೆಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.
ಇನ್ನೂ ಈ ಬಾರಿ ಜೂನ್‌ನಲ್ಲೇ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ ಮತ್ತಷ್ಟು ಬೆಲೆ ಏರಿಕೆಯಾಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಅಡಿಕೆ ಬೆಳೆಗಾರರಲ್ಲಿ ಕಾಡುತ್ತಿದೆ. ಅಲ್ಲದೆ, ಅಡಿಕೆಯನ್ನು ಒಳಗಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ.












Click it and Unblock the Notifications