Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಏಪ್ರಿಲ್ 6ರ ದರಪಟ್ಟಿ
Arecanut Price: ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ ಧಾರಣೆ ಕಳೆದ ಕೆಲ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು ದಾವಣಗೆರೆ ಮಾರುಕಟ್ಟೆಯಲ್ಲಿ (ಏಪ್ರಿಲ್ 6) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹಿಂದೆ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸ್ವಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ, ಇದೀಗ ಕಳೆದ ಕೆಲ ದಿನಗಳಿಂದ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ.

ಪ್ರಸ್ತುತ ಅಡಿಕೆ ಧಾರಣೆ ಎಷ್ಟಿದೆ?
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಏಪ್ರಿಲ್ 6) ಕೂಡ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 55,500 ರೂಪಾಯಿ, ಕನಿಷ್ಠ ದರ 50,099 ರೂಪಾಯಿ ಇದ್ದು, ಸರಾಸರಿ ಬೆಲೆ 54,174 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯು ಕಳೆದ ಕೆಲವು ದಿನಗಳಿಂದ ಇದೇ ದರ ಇದೆ. ಮೂರಕ್ಕೆ ಇಳಿಯಲಿಲ್ಲ, ಆರಕ್ಕೆ ಏರಲಿಲ್ಲ ಎನ್ನುವಂತಾಗಿದೆ.
ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಬಳಿಕ, ಫೆಬ್ರವರಿ ಮೂರನೇ ವಾರದವರೆಗೂ ಧಾರಣೆಯಲ್ಲಿ ಸುಧಾರಣೆ ಕಂಡಿತ್ತು.
ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆಸಿದ್ದು, ಆದರೆ, 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಏರಿಳಿತ ಆಗುತ್ತಲಿತ್ತು. ಆದರೆ, ಕಳೆದ ಕೆಲ ದಿನಗಳಿಂದ ದರದಲ್ಲಿ ಸ್ಥಿರತೆ ಇದ್ದು, ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರು ಇದ್ದಾರೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications