Arecanut price: ಸೆಪ್ಟೆಂಬರ್ ಮೂರನೇ ವಾರದ ಅಂತ್ಯದಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಹೀಗಿದೆ ದರಪಟ್ಟಿ

Arecanut Price: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಇಳಿಕೆಯತ್ತ ಹೊರಟಿದ್ದ ಇದೀಗ ಭರ್ಜರ ಏರಿಕೆಯಾಗಿದೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಭಾಗಗಳ ಜನರು ಸಾಮಾನ್ಯವಾಗಿ ಅಡಿಕೆಯನ್ನು ಶಿವಮೊಗ್ಗ ಮಾರುಕಟ್ಟಗೆ ಹಾಕುತ್ತಾರೆ. ಹಾಗಾದ್ರೆ ಇಂದು (ಸೆಪ್ಟೆಂಬರ್‌ 16) ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ನೀಡಲಾಗಿದೆ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 16) ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 60,399 ರೂಪಾಯಿ ಆಗಿದೆ. ಕಳೆದ ಎರಡು ದಿನಗಳಿಂದ ಇಳಿಕೆಯತ್ತ ಹೊರಟಿದ್ದ ದರ ಮತ್ತೆ ಇದೀಗ ಏರಿಕೆಯತ್ತ ಸಾಗಿದ್ದು, ಇದರಿಂದ ಬೆಳೆಗಾರರ ಬಾಯಿಗೆ ಸಕ್ಕರೆ ಹಾಕಿದಂತಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆಷ್ಟು ಏರಿಕೆಯಾಗುವ ಭರವಸೆಯಲ್ಲಿದ್ದಾರೆ.

Arecanut Price Rises to 60 399 per Quintal on September 16

ಪ್ರಸ್ತುತ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,399 ರೂಪಾಯಿ, ಕನಿಷ್ಠ ದರ 50,000 ರೂಪಾಯಿ ಇದ್ದು, ಸರಾಸರಿ ಬೆಲೆ 58,899 ರೂಪಾಯಿ ಆಗಿದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತುಯ. ಬಳಿಕ ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ಕಳೆದ ಕೆಲವು ದಿನಗಳಿಂದ 65,000 ರೂಪಾಯಿ ವರೆಗೂ ಬಂದು ಇಳಿಕೆಯಾಗಿ, ಮತ್ತೆ ಇದರೊಳಗೆ ಏರಿಕೆಯಾಗುತ್ತಲಿದೆ.

ಮೇ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲೇ ತುಸು ಏರಿಕೆಯಾಗಿ ಮತ್ತೆ ಇಳಿಕೆಯತ್ತ ಹೊರಟ್ಟಿತ್ತು. ಆದರೆ, ಇದೀಗ ಏರಿಕೆ ಆಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.

ರಾಜ್ಯದ ಈ ಬಾರಿ ವಾಡಿಕೆಯಂತೆ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ ಕೆಲವೆಡೆ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಅದೇನೇ ಇರ್ಲಿ ಅಂದುಕೊಂಡತೆ ಸರಿಯಾದ ಸಮಯಕ್ಕೆ ಮಳೆಯಾದ ಹಿನ್ನೆಲೆ ಉತ್ತಮ ಫಸಲೇನೋ ಬಂದಿದೆ. ಆದರೆ, ಬೆಳೆಗಾರರು ನಿರೀಕ್ಷೆ ಮಾಡಿದಷ್ಟು ಬೆಲೆ ಸಿಗುತ್ತಿಲ್ಲ ಎನ್ನುವುದೇ ಅಸಮಾಧಾನಕರ ಸಂಗತಿಯಾಗಿದೆ.

ದರದಲ್ಲಿ ಭಾರೀ ಪ್ರಮಾಣದಲ್ಲಿ ಇಳಕೆಯಾಗುತ್ತಿದೆ ಹೊರತು, ಏರಿಕೆಯಾದ್ರೆ ಜಾಸ್ತಿ ಆಗುತ್ತಿಲ್ಲ ಎನ್ನುವುದು ಅಡಿಕೆ ಬೆಳೆಗಾರರ ಕೊರಗಾಗಿದೆ. ಇದೀಗ ಸದ್ಯ ಏರುಗತಿಯಲ್ಲಿಯಲ್ಲಿ ಸಾಗಿತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಇದು ಮುಂದುವರೆಯಬಹುದು ಎನ್ನು ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ, ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಅಡಿಕೆ ಬೆಳೆಗಾರರಲ್ಲಿ ಕಾಡುತ್ತಿದೆ. ಅದರಲ್ಲೂ ಮಲೆನಾಡು ಭಾಗದ ರೈತರಿಗೆ.. ಯಾಕಂದ್ರೆ, ಈ ಭಾಗದಲ್ಲಿ ಜಿನುಗು ಮಳೆ ಮುಂದುವರೆದ ಬೆಳೆಗಾರರಿಗೆ ಇದೇ ದೊಡ್ಡ ಸವಾಲಾಗಿಬಿಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+