Arecanut Price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 20ರ ದರಪಟ್ಟಿ
Arecanut Price: ರಾಜ್ಯದಲ್ಲಿ ಇಳಿಕೆಯತ್ತ ಹೊರಟಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯತ್ತ ಹೊರಟಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಂತಾಗಿದೆ. ಹಾಗಾದ್ರೆ, ಇದೀಗ ಪ್ರಸ್ತುತ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ಸದ್ಯ ಅಡಿಕೆ ಕೊಯ್ಲಿನ ಸಮಯ ಆಗಿದ್ದು, ಈ ವೇಳೆಯೇ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿರುವುದು ಬೆಳೆಗಾರರ ಮುಖದಲ್ಲಿ ಸಂತಹ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ನವೆಂಬರ್ 20) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ತಿಳಿಯಿರಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ನವೆಂಬರ್ 20) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 60,599 ರೂಪಾಯಿ, ಕನಿಷ್ಠ ದರ 57,012 ರೂಪಾಯಿ ಇದ್ದು, ಸರಾಸರಿ ಬೆಲೆ 59,207 ರೂಪಾಯಿ ಇದೆ. ಈ ಮೂಲಕ ಇಂದು ಕೂಡ ನಿನ್ನೆಯ ದರವನ್ನೇ ಕಾಯ್ದುಕೊಂಡಿದೆ. ಯಾವುದೇ ಏರಿಳಿತಗಳು ಆಗಿಲ್ಲ. ಆದರೆ, ಕಳೆದ ಕೆಲ ದಿನಗಳ ಹಿಂದೆ ಇಳಿಕೆಯತ್ತ ಹೊರಟಿದ್ದ ದರ ಇದೀಗ ದೊಡ್ಡ ಮಟ್ಟದಲ್ಲಿ ಸುಧಾರಣೆ ಆಗಿರುವುದು ಬೆಳೆಗಾರರಲ್ಲಿ ಸಂಸತ ಹೆಚ್ಚಿಸಿದೆ.
ಸದ್ಯ ಅಡಿಕೆ ಧಾರಣೆ ಏರುಮುಖ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಆದರೆ ಇದೀಗ ಮತ್ತೆ ಏರಿಕೆಯತ್ತ ಹೊರಟಿದ್ದು, ಇದನ್ನು ಗಮನಿಸಿದರೆ ನವೆಂಬವೊಳಗೆ ಇದೇ ದರದತ್ತ ಸಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ನವೆಂಬರ್ ಮಧ್ಯದಿಂದ ಸತತ ಮತ್ತೆ ಭರ್ಜರಿ ಏರಿಕೆಯತ್ತ ಹೊರಟಿದೆ. ಇದೀಗ ಇಂದು ಅದೇ ಸ್ಥಿರತೆಯನ್ನೇ ಕಾಯ್ದುಕೊಂಡಿದೆ.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications