Arecanut Price: ಕ್ವಿಂಟಾಲ್‌ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 26ರ ದರಪಟ್ಟಿ

Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಳಿತ ಆಗುತ್ತಲಿರುತ್ತದೆ. ಕಳೆದ ಕೆಲ ದಿನಗಳಿಂದ ಭಾರೀ ಸುಧಾರಣೆಯಾಗಿತ್ತು. ಆದರೆ ಇದೀಗ ದಿಢೀರ್ ಕುಸಿತ ಕಂಡಿದೆ. ಹಾಗಾದ್ರೆ ಪ್ರಸ್ತುರ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇದೀಗ ಅಡಿಕೆ ಕೊಯ್ಲಿನ ಸಮಯ ಆಗಿದ್ದು, ಈ ವೇಳೆಯೇ ಸುಧಾರಣೆಯತ್ತ ಸಾಗಿದ್ದ ಅಡಿಕೆ ಧಾರಣೆ ದಿಢೀರ್ ಕುಸಿತ ಕಂಡಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕೂಡ ಕಡಿಮೆಯಾದಂತಾಗುದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ನವೆಂಬರ್ 26) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ತಿಳಿಯಿರಿ.

Arecanut prices increased on November 26 Know details

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ನವೆಂಬರ್ 26) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,299 ರೂಪಾಯಿ, ಕನಿಷ್ಠ ದರ 54,199 ರೂಪಾಯಿ ಇದ್ದು, ಸರಾಸರಿ ಬೆಲೆ 58,692 ರೂಪಾಯಿ ಇದೆ. ಈ ಮೂಲಕ ದರ ಭಾರೀ ಕುಸಿತವಾಗಿದ್ದು, ಬೆಳೆಗಾರರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

ಸದ್ಯ ಅಡಿಕೆ ಧಾರಣೆ ಮತ್ತೆ ಆಡಿದ್ದೇ ಆಟ ಎನ್ನುವಂತೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.

ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಆದರೆ ನವೆಂಬರ್ ಕೊನೇವರೆಗೂ ಏರಿಕೆಯತ್ತ ಹೊರಟಿತ್ತು. ಆದರೆ, ಇದೀಗ ಮತ್ತೆ ಕುಸಿತ ಕಂಡಿದೆ.

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ ಇದೀಗ ದಿಢೀರ್ ಕುಸಿತವಾಗಿದ್ದು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+