Arecanut Price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 29ರ ದರಪಟ್ಟಿ
Arecanut Price: ರಾಜ್ಯದಲ್ಲಿ ಏರಿಕೆಯತ್ತ ಹೊರಟಿದ್ದ ಅಡಿಕೆ ಧಾರಣೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ನವೆಂಬರ್ 29) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ತಿಳಿಯಿರಿ.
ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ನವೆಂಬರ್ 29) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 62,506 ರೂಪಾಯಿ, ಕನಿಷ್ಠ ದರ 54,199 ರೂಪಾಯಿ ಇದ್ದು, ಸರಾಸರಿ ಬೆಲೆ 57,506 ರೂಪಾಯಿ ಇದೆ. ಈ ಮೂಲಕ ದರ ಕುಸಿತವಾಗಿದ್ದು, ಬೆಳೆಗಾರರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

ಸದ್ಯ ಅಡಿಕೆ ಧಾರಣೆ ಮತ್ತೆ ಆಡಿದ್ದೇ ಆಟ ಎನ್ನುವಂತೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಆದರೆ, ನವೆಂಬರ್ ಕೊನೆಯಲ್ಲಿ ಮತ್ತೆ ಕುಸಿತ ಕಂಡಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ ಇದೀಗ ದಿಢೀರ್ ಕುಸಿತ ಕಂಡಿದೆ. ಕಳೆದ ಕೆಲ ದಿನಗಳಿಂದ ಇದೇ ದರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
ಡೈಲಿಹಂಟ್ ಮಾತೃಸಂಸ್ಥೆ 'ವರ್ಸ್ ಇನ್ನೋವೇಶನ್' ಆಡಳಿತ ಮಂಡಳಿಗೆ ಪಿ.ಆರ್. ರಮೇಶ್ ನೇಮಕ: ಆಡಳಿತಕ್ಕೆ ಹೊಸ ಬಲ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications