Arecanut Price: ಕ್ವಿಂಟಾಲ್‌ ಅಡಿಕೆ ಧಾರಣೆ ಭರ್ಜರಿ ಏರಿಕೆ: ನವೆಂಬರ್ 17ರ ದರಪಟ್ಟಿ ಇಲ್ಲಿದೆ

Arecanut Price: ರಾಜ್ಯದಲ್ಲಿ ಆಕ್ಟೋಬರ್ ತಿಂಗಳಾಂತ್ಯದಿಂದ ನವೆಂಬರ್ ಎರಡನೇ ವಾರದವರೆಗೂ ಅಡಿಕೆ ಧಾರಣೆ ಭಾರೀ ಕುಸಿತವಾಗಿತ್ತು. ಬಳಿಕ ಸುಧಾರಣೆ ಕಂಡಿದ್ದು, ಇದೀಗ ಭರ್ಜರಿ ಏರಿಕೆಯತ್ತ ಹೊರಟಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಂತಾಗಿದೆ. ಹಾಗಾದ್ರೆ, ಇದೀಗ ಪ್ರಸ್ತುತ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದೀಗ ಸದ್ಯ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಈ ವೇಳೆಯೇ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿರುವುದು ಬೆಳೆಗಾರರಲ್ಲಿ ಮುಖದಲ್ಲಿ ಸಂತಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ನವೆಂಬರ್ 17) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ತಿಳಿಯಿರಿ.

Arecanut prices increased to 62 506 per quintal on November 17

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ನವೆಂಬರ್ 17) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 62,506 ರೂಪಾಯಿ, ಕನಿಷ್ಠ ದರ 58,319 ರೂಪಾಯಿ ಇದ್ದು, ಸರಾಸರಿ ಬೆಲೆ 57,506 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ ಇಳಿಕೆಯತ್ತ ಹೊರಟಿದ್ದ ದರ ಇದೀಗ ದೊಡ್ಡ ಮಟ್ಟದಲ್ಲಿ ಭಾರೀ ಸುಧಾರಣೆ ಕಂಡಿದೆ.

ಸದ್ಯ ಅಡಿಕೆ ಧಾರಣೆ ಏರುಮುಖ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.

ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಆದರೆ ಇದೀಗ ಮತ್ತೆ ಏರಿಕೆಯತ್ತ ಹೊರಟಿದ್ದು, ಇದನ್ನು ಗಮನಿಸಿದರೆ ನವೆಂಬವೊಳಗೆ ಇದೇ ದರದತ್ತ ಸಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ನಂತರ ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ನವೆಂಬರ್ ಮಧ್ಯದಲ್ಲಿ ಮತ್ತೆ ಭರ್ಜರಿ ಏರಿಕೆಯತ್ತ ಹೊರಟಿದೆ.

ಈ ಬಾರಿ ರಾಜ್ಯಕ್ಕೆ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಅಡಿಕೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಮತ್ತೊಂದೆಡೆ, ಕಳೆದ ಕೆಲ ದಿನಗಳಿಂದ ಸತತ ಇಳಿಕೆ ಕಂಡಿದ್ದ ಧಾರಣೆ ಇದೀಗ ಭಾರೀ ಏರಿಕೆಯಾಗುತ್ತಿದೆ. ಇದರಿಂದ ಬೆಳೆಗಾರರಿಗೆ ಮತ್ತೆ ಜೀವ ಬಂದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+