Arecanut Price: ನವೆಂಬರ್ ಅಂತ್ಯದೊಳಗೆ ಕ್ವಿಂಟಾಲ್ ಅಡಿಕೆ ದರ 70,000 ರೂಪಾಯಿ ಮುಟ್ಟುವ ಸಾಧ್ಯತೆ: ಪ್ರಸ್ತುತ ದರ ಇಲ್ಲಿದೆ
Arecanut Price: ಅಡಿಕೆಮ ತಿಂದರೆ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಗಳು ಹಬ್ಬಿದ್ದವು. ಬಳಿಕ 69,000 ರೂಪಾಯಿ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ ದಿಢೀರ್ ಕುಸಿತ ಕಾಣುತ್ತಾ ಬಂದಿತ್ತು. ಇದೀಗ ಇದು ಸುಳ್ಳು ಎನ್ನುವ ಸ್ಪಷ್ಟನೆಯ ಸುದ್ದಿಗಳು ಹಬ್ಬುತ್ತಿದ್ದಂತೆ ಮತ್ತೆ ಚೇತರಿಕೆ ಕಂಡಿದೆ. ನವೆಂಬರ್ ಅಂತ್ಯದೊಳಗೆ 70,000 ಮುಟ್ಟುವ ಸಾಧ್ಯತೆಯೂ ಇದೆ. ಹಾಗಾದ್ರೆ ಇದೀಗ ಪ್ರಸ್ತುತ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ಏರುಮುಖ ಮಾಡಿದೆ. ಇದೀಗ ಸದ್ಯ ಅಡಿಕೆ ಕೊಯ್ಲಿನ ಸಮಯವಾಗಿದೆ. ಈ ವೇಳೆಯೇ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿರುವುದು ಬೆಳೆಗಾರರಲ್ಲಿ ಮುಖದಲ್ಲಿ ಸಂತಸ ಹೆಚ್ಚಾಗುವಂತೆ ಮಾಡಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ನವೆಂಬರ್ 14) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ತಿಳಿಯಿರಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು (ನವೆಂಬರ್ 14) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 62,506 ರೂಪಾಯಿ, ಕನಿಷ್ಠ ದರ 56,699 ರೂಪಾಯಿ ಇದ್ದು, ಸರಾಸರಿ ಬೆಲೆ 57,506 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ ಇಳಿಕೆಯತ್ತ ಸಾಗಿದ್ದ ದರ ಇದೀಗ ಚೇತರಿಕೆ ಕಂಡಿದೆ.
ಸದ್ಯ ಅಡಿಕೆ ಧಾರಣೆ ಏರುಮುಖ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಆದರೆ ಇದೀಗ ಮತ್ತೆ ಏರಿಕೆಯತ್ತ ಹೊರಟಿದ್ದು, ಇದೇ ದರ ನವೆಂವೊಳಗೆ ತಲುಪುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಎರಡನೇ ವಾರದಿಂದ ನಾಲ್ಕನೆ ವಾರದ ಆರಂಭದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ.
2025ರ ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಅಡಿಕೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಮತ್ತೊಂದೆಡೆ, ಕಳೆದ ಕೆಲ ದಿನಗಳಿಂದ ಸತತ ಇಳಿಕೆ ಕಂಡಿದ್ದ ಧಾರಣೆ ಇದೀಗ ಭಾರೀ ಏರಿಕೆಯಾಗುತ್ತಿದ್ದು, ಅಡಿಕೆ ಬೆಳೆಗಾರರಲ್ಲಿ ಮಂದಹಾಸ ಹೆಚ್ಚಾದಂತೆ ಆಗಿದೆ. ಅಲ್ಲದೆ, ನವೆಂಬರ್ ಅಂತ್ಯದೊಳಗೆ ಮತ್ತೆ 70,000 ಗಡಿ ಮುಟ್ಟಬಹುದು ಅಥವಾ ಅದಕ್ಕಿಂತಲೂ ಜಾಸ್ತಿಯಾಗಬಹುದು ಎಂದು ಹೇಳಲಾಗುತ್ತಿದೆ.












Click it and Unblock the Notifications