ವಿಧಾನಸಭೆ ಚುನಾವಣೆ 2023: ದಾವಣಗೆರೆ ಜಿಲ್ಲೆಯ ಆಕಾಂಕ್ಷಿಗಳ ವಿವರ ಬಿಚ್ಚಿಟ್ಟ ಬಿಜೆಪಿ ಜಿಲ್ಲಾಧ್ಯಕ್ಷ

ದಾವಣಗೆರೆ, ಫೆಬ್ರವರಿ, 20: ರಾಜ್ಯದಲ್ಲಿ ಇನ್ನು‌ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲೆಯಲ್ಲಿಯೂ ಬಿಜೆಪಿಯಿಂದ ಸ್ಪರ್ಧಿಸಲು ಹಲವರು ಆಕಾಂಕ್ಷಿಗಳಿದ್ದಾರೆ. ಏನಿದ್ದರೂ ಅಂತಿಮ ತೀರ್ಮಾನ ಪಕ್ಷದ ಹೈಕಮಾಂಡ್‌ನದ್ದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು‌.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. 130 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ. ದಾವಣಗೆರೆಯ ಏಳು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಗಳಿದ್ದಾರೆ. ಅಭ್ಯರ್ಥಿ ಘೋಷಣೆ ಮಾಡುವ ಅಧಿಕಾರ ನಮಗಿಲ್ಲ. ಆದರೆ ಅಪೇಕ್ಷಿತರ ಪಟ್ಟಿ ಕಳುಹಿಸುತ್ತೇವೆ. ನಂತರ ವರಿಷ್ಠರು ಘೋಷಣೆ ಮಾಡಲಿದ್ದಾರೆ. ಈಗಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 6 ಆಕಾಂಕ್ಷಿತರು ಅರ್ಜಿ ಸಲ್ಲಿಸಿದ್ದಾರೆ. ದಾವಣಗೆರೆ ಉತ್ತರದಲ್ಲಿ 8, ಮಾಯಕೊಂಡದಲ್ಲಿ 15ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಹೊನ್ನಾಳಿ, ಜಗಳೂರು, ಚನ್ನಗಿರಿ ಕ್ಷೇತ್ರದಲ್ಲಿ ಶಾಸಕರು ಇರುವುದರಿಂದ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ನಾನೂ ಕೂಡ ಹರಿಹರ ಕ್ಷೇತ್ರದಿಂದ ಕಣಕ್ಕಿಳಿಯಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹೇಳಿದರು.

 8 ಅಪೇಕ್ಷಿತರು ಅರ್ಜಿ ಸಲ್ಲಿಸಿದ್ದಾರೆ

8 ಅಪೇಕ್ಷಿತರು ಅರ್ಜಿ ಸಲ್ಲಿಸಿದ್ದಾರೆ

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು 8 ಅಪೇಕ್ಷಿತರು ಅರ್ಜಿ ಸಲ್ಲಿಸಿದ್ದಾರೆ. ಯಾರ ಹೆಸರೂ ಬಹಿರಂಗಪಡಿಸಲು ಆಗದು. ಸಂಸದ ಜಿ. ಎಂ. ಸಿದ್ದೇಶ್ವರ ಅವರು ಅರ್ಜಿ ಸಲ್ಲಿಸಿಲ್ಲ. ವಿಧಾನಸಭೆ ಚುನಾವಣೆಗೆ ಉತ್ತರದಿಂದ ಸ್ಪರ್ಧಿಸಲು ಸಂಸದರು ಆಸಕ್ತಿ ಹೊಂದಿರುವ ಬಗ್ಗೆ ಗೊತ್ತಿಲ್ಲ. ಶಾಸಕ ಎಸ್. ಎ. ರವೀಂದ್ರನಾಥ್ ಸ್ಪರ್ಧಿಸುತ್ತಾರೆಯೋ ಇಲ್ಲವೋ ಅವರನ್ನೇ ಕೇಳಿ ಎಂದು ವೀರೇಶ್ ಹನಗವಾಡಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 ರೈತ, ಕಾರ್ಮಿಕ ಸ್ನೇಹಿ ಬಜೆಟ್ ಇದಾಗಿದೆ

ರೈತ, ಕಾರ್ಮಿಕ ಸ್ನೇಹಿ ಬಜೆಟ್ ಇದಾಗಿದೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ಜನರಿಗೆ ತೃಪ್ತಿ ತಂದಿದೆ. ಇದು ರೈತ, ಕಾರ್ಮಿಕ ಸ್ನೇಹಿ ಹಾಗೂ ಹಿಂದುಳಿದ ವರ್ಗಗಳ ಪರವಾಗಿದೆ. ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಚುನಾವಣೆ ದೃಷ್ಠಿ ಹೊಂದಿಲ್ಲ. ಇದೊಂದು ಜನಸ್ನೇಹಿ ಬಜೆಟ್ ಆಗಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣದಲ್ಲಿ ಆದ್ಯತೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ, ನೀರಾವರಿ ಯೋಜನೆಗಳು ಹೀಗೆ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೇಂದ್ರದಂತೆ ರಾಜ್ಯದಲ್ಲೂ ಉತ್ತಮ ಬಜೆಟ್ ಮಂಡಿಸಲಾಗಿದೆ ಎಂದರು.

 ಸರ್ವಸ್ಪರ್ಶಿ ಬಜೆಟ್ ನೀಡಿದ್ದಾರೆ

ಸರ್ವಸ್ಪರ್ಶಿ ಬಜೆಟ್ ನೀಡಿದ್ದಾರೆ

ಅದರಲ್ಲೂ ದಾವಣಗೆರೆ ಜಿಲ್ಲೆಯಲ್ಲಿ ಶೋಧ ಮತ್ತು ವಿಪತ್ತಿನ ವೇಳೆ ಕಾರ್ಯಾಚರಣೆ ಬಲಪಡಿಸಲು ಹೊಸ ಎಸ್‌ಡಿಆರ್‌ಎಫ್ ಕಂಪನಿ ಮಂಜೂರಾಗಿದೆ. ವಿಮಾನ ನಿಲ್ದಾಣದ ನಿರ್ಮಾಣವನ್ನು ಪ್ರಾರಂಭಿಸಲಾಗುತ್ತಿದೆ. ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿ ಶಹಾಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ, ಸೂರಗೊಂಡನಕೊಪ್ಪದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸೌಲಭ್ಯ, ದಾವಣಗೆರೆಯಲ್ಲಿ 3ನೇ ವಿಶ್ವಕನ್ನಡ ಸಮ್ಮೇಳನ ಆಯೋಜನೆ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸರ್ವಸ್ಪರ್ಶಿ ಬಜೆಟ್ ನೀಡಿದ್ದಾರೆ ಎಂದು ತಿಳಿಸಿದರು.

 ಸುದ್ದಿಗೋಷ್ಠಿಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು?

ಸುದ್ದಿಗೋಷ್ಠಿಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು?

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಎ. ಹೆಚ್. ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸಕರಿಯಪ್ಪ, ಶಿವರಾಜ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ಬಿ. ಎಸ್. ಜಗದೀಶ್, ಜಿಲ್ಲಾ ವಕ್ತಾರ ಶಿವಶಂಕರ್, ದೂಡಾ ಮಾಜಿ ಅಧ್ಯಕ್ಷ ಕೆ. ಎಂ. ಸುರೇಶ್, ಮಾಜಿ ಶಾಸಕ ಬಸವರಾಜ್ ನಾಯ್ಕ್, ಎಚ್. ಪಿ. ವಿಶ್ವಾಸ್, ನರೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+