ವಿಧಾನಸಭೆ ಚುನಾವಣೆ: ಹೈಕಮಾಂಡ್‌ ಟಿಕೆಟ್ ಕೊಟ್ಟರೆ ಕಣಕ್ಕಿಳಿಯುತ್ತೇನೆ ಎಂದ ಬಿಜೆಪಿ ಶಾಸಕ

ದಾವಣಗೆರೆ, ನವೆಂಬರ್‌, 25: ವಿಧಾನಸಭೆ ಚುನಾವಣೆ ಹಿನ್ನೆಲೆ ಟಿಕೆಟ್‌ಗಾಗಿ ರಾಜ್ಯದಲ್ಲಿ ಈಗಿನಿಂದಲೇ ಭಾರಿ ಕಸರತ್ತುಗಳು ನಡೆಯುತ್ತಿವೆ. ಹಾಗೆಯೇ ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್‌ಗೆ ಫೈಟ್‌ ನಡೆಯುತ್ತಲೇ ಇದೆ. "ಬಿಜೆಪಿ ಹೈಕಮಾಂಡ್ ಟಿಕೆಟ್ ‌ನೀಡಿದರೆ ಸ್ಪರ್ಧಿಸಲು ಸಿದ್ದನಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇವೆ" ಎಂದು ಬಿಜೆಪಿಯ ಹಿರಿಯ ಶಾಸಕ ಎಸ್.‌ ಎ. ರವೀಂದ್ರನಾಥ್ ಹೇಳಿದ್ದಾರೆ.

77ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿರುವ ರವೀಂದ್ರನಾಥ್ ಅವರು, ಮಾಧ್ಯಮದವರ ಜೊತೆ ಮಾತನಾಡುವಾಗ ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಪಕ್ಷದ ವರಿಷ್ಠರು ಹೈಕಮಾಂಡ್ ಸೀಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಇದುವರೆಗೂ ಪಕ್ಷ ಹೇಳಿದಂತೆ ನಡೆದುಕೊಂಡಿದ್ದೇನೆ. ಹಾಗಾಗಿ ನಾನು ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಿದ್ದೇನೆ ಎಂದು ರವೀಂದ್ರನಾಥ್ ಹೇಳಿದರು. ಇನ್ನು ಸಂಸದ ಜಿ. ಎಂ. ಸಿದ್ದೇಶ್ವರ್ ಮಾತನಾಡಿದ್ದು, ಕಾಂಗ್ರೆಸ್‌ನಿಂದ ಉತ್ತರ ವಿಧಾನಸಭಾ ಕ್ಷೇತ್ರದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುದನ್ನು ನೋಡಿಕೊಂಡು ಉತ್ತರಿಸುತ್ತೇವೆ. ರವೀಂದ್ರನಾಥ್ ಸ್ಪರ್ಧೆಗೆ ಒಲವು ಇದೆ ಎಂದಿದ್ದಾರೆ. ಅವರು ಸ್ಪರ್ಧೆ ಮಾಡದಿದ್ದರೆ ಆಗ ನೋಡೋಣ ಎಂದು ಹೇಳಿದರು‌.

ಅರ್ಜಿ ಸಲ್ಲಿಸದ ಕಾಂಗ್ರೆಸ್‌ ಆಕಾಂಕ್ಷಿಗಳು; ದಾವಣಗೆರೆ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಇದುವರೆಗೂ ಯಾರೂ ಅರ್ಜಿ ಸಲ್ಲಿಸಿಲ್ಲ. ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಸ್. ಎಸ್.‌ ಮಲ್ಲಿಕಾರ್ಜುನ್ ಇದುವರೆಗೆ ಅರ್ಜಿ ಹಾಕದಿರುವುದು ಕುತೂಹಲ ಕೆರಳಿಸಿದೆ. ಮಲ್ಲಿಕಾರ್ಜುನ್ ಮಾತ್ರವಲ್ಲದೇ, ಯಾವ ಕಾಂಗ್ರೆಸ್ ಮುಖಂಡರು ಅರ್ಜಿ ಹಾಕಿಲ್ಲ. ಇನ್ನು ದಾವಣಗೆರೆ ದಕ್ಷಿಣದಿಂದ ಸ್ಪರ್ಧಿಸಲು ಐದಾರು ಆಕಾಂಕ್ಷಿಗಳು ಕೆಪಿಸಿಸಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಹ ಅರ್ಜಿ ಸಲ್ಲಿಸಿದ್ದು, ದಾವಣಗೆರೆ ಉತ್ತರಕ್ಕೆ ಮಾತ್ರ ಯಾರೂ ಅರ್ಜಿ ಹಾಕಿಲ್ಲದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Assembly election: BJP MLA SA Ravindranath said will contest if given ticket by HighCommand

ಜಿಲ್ಲೆಯಲ್ಲಿ ಹೆಚ್ಚಿದ ಟಿಕೆಟ್‌ ಪೈಪೋಟಿ; ಇನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ಅವರು ಮಾತನಾಡಿ, ದಾವಣಗೆರೆ ಉತ್ತರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಎಸ್. ಮಲ್ಲಿಕಾರ್ಜುನ್‌ ಅವರೇ ಇದ್ದಾರೆ ಎಂದಿದ್ದಾರೆ. ಇದನ್ನು ಬಿಟ್ಟರೆ ಬೇರೆ ಯಾರೂ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಸಲ್ಲಿಸದವರಿಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲು ಬಿಜೆಪಿಯಲ್ಲಿ ಹಲವರು ಆಕಾಂಕ್ಷಿಗಳಾಗಿದ್ದರು. ರವೀಂದ್ರನಾಥ್ ಅವರಿಗೆ 77 ವರ್ಷ ವಯಸ್ಸಾದ ಕಾರಣ ಟಿಕೆಟ್ ಸಿಗುವುದು ಕಷ್ಟಸಾಧ್ಯ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈಗ ರವೀಂದ್ರನಾಥ್ ಚುನಾವಣೆಯಲ್ಲಿ ಸ್ಪರ್ಧಿಸಲು ಒಲವಿದೆ ಎಂದಿರುವುದು ಆಕಾಂಕ್ಷಿಗಳ ಆಸೆಗೆ ತಣ್ಣೀರು ಎರಚಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+